ETV Bharat / state

ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ : ಕಿಮ್ಮನೆ ವಿಶ್ವಾಸ

ಎಲ್ಲೆಡೆ ಕಾಂಗ್ರೆಸ್ ಗೆಲುವಿಗೆ ಪೂರಕವಾದ ವಾತಾವರಣ ಕಂಡು ಬರುತ್ತಿದೆ. ಎಲ್ಲಾ ಅಂಶಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದ ಮತದಲ್ಲೇ ಗೆಲುವು ಸಾಧಿಸಲಿದ್ದಾರೆ ಎಂದರು..

ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಸುದ್ದಿಗೋಷ್ಟಿ

author img

By

Published : Nov 22, 2021, 5:19 PM IST

ಶಿವಮೊಗ್ಗ : ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಗೆಲುವಿನ ಕುರಿತಂತೆ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಿಶ್ವಾಸ ವ್ಯಕ್ತಪಡಿಸಿರುವುದು..

ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಜೆಡಿಎಸ್​​​​ನ ಹಲವರು ಕಾಂಗ್ರೆಸ್ ಸೇರಿದ್ದಾರೆ. ಜೊತೆಗೆ ಕಾಂಗ್ರೆಸ್ ಬೆಂಬಲಿತ ಸದಸ್ಯರು ಈ ಬಾರಿಯ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ.

ಎಲ್ಲೆಡೆ ಕಾಂಗ್ರೆಸ್ ಗೆಲುವಿಗೆ ಪೂರಕವಾದ ವಾತಾವರಣ ಕಂಡು ಬರುತ್ತಿದೆ. ಎಲ್ಲಾ ಅಂಶಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದ ಮತದಲ್ಲೇ ಗೆಲುವು ಸಾಧಿಸಲಿದ್ದಾರೆ ಎಂದರು.

ಇನ್ನು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಾಯ್ದೆಗಳನ್ನು ವರ್ಷದ ನಂತರ ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಒಂದು ವರ್ಷದ ನಂತರ ಪ್ರಧಾನಿಗೆ ಅರಿವಾಯಿತೆ..? ಮೊದಲೇ ಅರ್ಥ ಮಾಡಿಕೊಂಡಿದ್ದರೆ ಈ ರೀತಿಯ ಸನ್ನಿವೇಶವೇ ಬರುತ್ತಿರಲಿಲ್ಲ.

ರೈತರ ಹೋರಾಟದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಕೊಡಬೇಕು ಎಂದ ಅವರು, ಬಿಜೆಪಿ ಜಾತಿ, ಧರ್ಮ, ಹಣದ ಆಧಾರದ ಮೇಲೆ ಚುನಾವಣೆ ನಡೆಸುತ್ತಿದೆ. ಜನರು ನೆರೆ ಹಾವಳಿಯಿಂದ ತೊಂದರೆ ಅನುಭವಿಸುತ್ತಿದ್ದರೆ, ಬಿಜೆಪಿಯವರು ಚುನಾವಣೆ ಕಡೆಗೆ ಗಮನ ಹರಿಸುತ್ತಿದ್ದಾರೆ ಎಂದು ಟೀಕಿಸಿದರು.

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಿಮ್ಮನೆ ಕಿಡಿ : ಇನ್ನೂ ಗಾಂಧಿ ಹಾಗೂ ನೆಹರೂ ವಿರುದ್ಧವಾಗಿ ಕೆಲವರು ಪುಸ್ತಕ ಬರೆಯುತ್ತಾರೆ. ಹೀಗೆ ಪುಸ್ತಕ ಬರೆಯುವವರ ವೈಯಕ್ತಿಕ ಬದುಕು ಕುಲಗೆಟ್ಟು ಹೋಗಿದೆ. ಇವರು ತಮ್ಮ ಮಕ್ಕಳಿಗೇ ಮಾದರಿ ಆಗಲು ಸಾಧ್ಯವಿಲ್ಲ. ಇಂಥವರು ಗಾಂಧಿ ಹಾಗೂ ನೆಹರೂ ವಿರುದ್ಧವಾಗಿ ಪುಸ್ತಕ ಬರೆಯುತ್ತಾರೆ.

ಪ್ರಧಾನಿ ಮೋದಿ ಚಿನ್ನದ ರಸ್ತೆ ಮಾಡುತ್ತಾರೆ, ದೇಶದ ಸಾಲ ತೀರಿಸಿದ್ದಾರೆ ಎನ್ನುತ್ತಿದ್ದಾರೆ. ಆದರೆ, ಸಾಲ ಮಾಡಿ ದೇಶಬಿಟ್ಟು ಓಡಿಹೋದವರು ಯಾರೂ ವಾಪಸ್ ಬಂದಿಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಿಮ್ಮನೆ ರತ್ನಾಕರ್‌ ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.