ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅತಿವೃಷ್ಟಿ ನಷ್ಟದ ಪರಿಹಾರ ಕೊಡಿಸುವಲ್ಲಿ ಹಾಗೂ ಕಾಡು ಪ್ರಾಣಿಗಳಿಂದ ಆದ ಬೆಳೆ ನಷ್ಟ ಪರಿಹಾರ ಹಾಗೂ ಸೂಕ್ತ ರಕ್ಷಣೆ ನೀಡುವಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿಫಲರಾಗಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇಂದು ಸುಮಾರು 30 ಕಿ.ಮೀ ದೂರ ಪಾದಯಾತ್ರೆ ನಡೆಸಿದರು.
ತೀರ್ಥಹಳ್ಳಿ ತಾಲೂಕು ಆಗುಂಬೆ ಗ್ರಾಮ ಪಂಚಾಯತ್ನಿಂದ ಮೇಗರವಳ್ಳಿ ಅರಣ್ಯ ಇಲಾಖೆಯ ಕಚೇರಿಯವರೆಗೂ ಹಾಗೆಯೇ ಆಗುಂಬೆಯಿಂದ ಪ್ರಾರಂಭವಾದ ಪಾದಯಾತ್ರೆ ಕೌರಿಹಕ್ಕಲು, ಹೊಸೂರು, ಗುಡ್ಡೆಕೇರಿ, ನಾಲೂರು, ಕೊಳಗಿ, ಅರೆಕಲ್ಲು ನಿಂದ ಮೇಗರವಳ್ಳಿ ಅರಣ್ಯ ಇಲಾಖೆವರೆಗೂ ಪಾದಯಾತ್ರೆ ನಡೆಸಿದ್ದಾರೆ.
ದಾರಿಯುದ್ದಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ತೀರ್ಥಹಳ್ಳಿ ಕ್ಷೇತ್ರದಲ್ಲಿ ಶಾಸಕ ಆರಗ ಜ್ಞಾನೇಂದ್ರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡರು.