ETV Bharat / state

ಜಿಲ್ಲಾ ಉಸ್ತುವಾರಿ ಸಚಿವರಿಂದ ಆಧಾರ್​ ಕಾರ್ಡ್​​ ವಸೂಲಿ: ಕೆ.ಬಿ.ಪ್ರಸನ್ನ ಕುಮಾರ್

ಜಿಲ್ಲಾ ಉಸ್ತುವಾರಿ ಸಚಿವರು ಉಚಿತವಾಗಿ ರೋಗನಿರೋಧಕ ಶಕ್ತಿ ವೃದ್ಧಿಸುವ ಆಯುರ್ವೇದ ಔಷಧ ಕಿಟ್ ನೀಡುತ್ತಿದ್ದಾರೆ. ಆದರೆ, ಅದಕ್ಕೆ ಆಧಾರ್​ ಕಾರ್ಡ್​​​ ಪಡೆಯುತ್ತಿರುವುದು ಏಕೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪ್ರಶ್ನಿಸಿದರು.

Former MLA KB Prasanna Kumar
ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್
author img

By

Published : Aug 1, 2020, 6:24 PM IST

ಶಿವಮೊಗ್ಗ: ಜಿಲ್ಲೆಯ ಸಮಸ್ಯೆಗಳನ್ನು ಆಲಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು ಆಧಾರ್ ಕಾರ್ಡ್ ವಸೂಲಿ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಉಚಿತವಾಗಿ ರೋಗನಿರೋಧಕ ಶಕ್ತಿ ವೃದ್ಧಿಸುವ ಆಯುರ್ವೇದ ಔಷಧ ಕಿಟ್ ನೀಡುತ್ತಿದ್ದಾರೆ. ಅದನ್ನು ಸ್ವಾಗತಿಸುತ್ತೇವೆ. ಆದರೆ, ಕಿಟ್ ನೀಡುವ ವೇಳೆ ಆಧಾರ್ ಕಾರ್ಡ್ ಯಾಕೆ ಪಡೆಯುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಪಕ್ಷ ಭೇದ ಮರೆತು ಎಲ್ಲರಿಗೂ ಕಿಟ್ ನೀಡುತ್ತಿರುವುದು ಒಳ್ಳೆಯದು. ಆದರೆ, ಕೆಲವೊಂದು ಕಡೆ ಕಿಟ್​​​​ಗೆ ಹಣ ಕೇಳುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆಯೂ ಸಚಿವರು ಗಮನ ಹರಿಸಬೇಕು. ಕೂಡಲೇ ಆಧಾರ್​​​ ಕಾರ್ಡ್ ಪಡೆಯುವುದನ್ನು ನಿಲ್ಲಿಸಬೇಕು ಎಂದರು.

ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದ್ರೇಶ್ ಮಾತನಾಡಿ, ಕಿಟ್ ಜೊತೆಗೆ ಆಧಾರ್ ಕಾರ್ಡ್ ತೆಗೆದುಕೊಂಡು ವೋಟ್​​ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.