ಶಿವಮೊಗ್ಗ: ಕೋವಿಡ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕ ಹಾಗೂ ಖಾಸಗಿ ಆಸ್ಪತ್ರೆಗಳ ಮೂಲಕ ಚಿಕಿತ್ಸೆ ಒದಗಿಸಲಾಗುತ್ತಿದೆ. ಈ ಯೋಜನೆಯಡಿ ಇದುವರೆಗೆ ಹೆಸರು ನೋಂದಾಯಿಸದ ಖಾಸಗಿ ಆಸ್ಪತ್ರೆಗಳು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮನವಿ ಮಾಡಿದ್ದಾರೆ.
ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ ರೆಫರಲ್ ಮೂಲಕ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಕೋವಿಡ್ ರೋಗಿಗಳ ವೆಚ್ಚವನ್ನು ಸರ್ಕಾರ ಭರಿಸಲಿದೆ. ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಉಚಿತವಾಗಿ ಒದಗಿಸಲಾಗುತ್ತದೆ.
ಒಂದೊಮ್ಮೆ ಕೋವಿಡ್ ರೋಗಿಗಳು ತಮ್ಮ ಇಚ್ಚಾನುಸಾರ ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ ಜನರಲ್ ವಾರ್ಡ್ಗೆ 10 ಸಾವಿರ ರೂ, ಎಚ್‍ಡಿಯು 12 ಸಾವಿರ ರೂ, ಐಸೋಲೇಷನ್ ಐಸಿಯುಗೆ 15 ಸಾವಿರ ಹಾಗೂ ಐವೆಂಟಿಲೇಟರ್ ಸಹಿತ ಸೋಲೇಷನ್ ಐಸಿಯುಗೆ 25 ಸಾವಿರ ರೂ.ಗಳನ್ನು ಭರಿಸಬೇಕು.
ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ ಅಥವಾ ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಸರ್ಕಾರ ನಿಗದಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರ ವಿಧಿಸಿದರೆ 1800 425 8330 ಗೆ ಹಾಗೂ 1912 ಕರೆ ಮಾಡಿ ದೂರು ನೀಡಬಹುದು. ಇಲ್ಲವೇ 080-22536200ಗೆ ಕರೆ ಮಾಡಬಹುದು ಎಂದು ತಿಳಿದ್ದಾರೆ.
ಇದನ್ನೂ ಓದಿ: 'O' ರಕ್ತದ ಗ್ರೂಪ್, ಧೂಮಪಾನಿಗಳಲ್ಲಿ ಕೋವಿಡ್ ಸೋಂಕು ಕಡಿಮೆ.. ಯಾರಿಗೆ ಅಪಾಯ!?