ಶಿವಮೊಗ್ಗ: ನಿನ್ನೆ ತಡರಾತ್ರಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷನ ಅಂತ್ಯಕ್ರಿಯೆ ವಿದ್ಯಾನಗರದಲ್ಲಿರುವ ರೋಟರಿ ಚಿತಾಗಾರದಲ್ಲಿ ನಡೆದಿದೆ.
ಹರ್ಷನ ಚಿತೆಗೆ ತಂದೆಯಿಂದಲೇ ಅಗ್ನಿಸ್ಪರ್ಶ ಮಾಡಲಾಯಿತು. ಅಂತ್ಯಕ್ರಿಯೆ ಅಂತಿಮ ವಿಧಿ ವಿಧಾನಗಳು ಕಾಳಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಉಪಸ್ಥಿತರಿದ್ದರು.
ಇದನ್ನೂ ಓದಿ: ಹರ್ಷನ ಅಂತಿಮಯಾತ್ರೆ ವೇಳೆ ಕಲ್ಲು ತೂರಾಟ.. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರಿಂದ ಟಿಯರ್ ಗ್ಯಾಸ್ ಪ್ರಯೋಗ
ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಅಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ಜೈ ಶ್ರೀರಾಮ್, ಹರ್ಷ, ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದರು.