ETV Bharat / state

ಅಪ್ಪಾಜಿ ಗೌಡರ ಅಂತಿಮ ದರ್ಶನಕ್ಕೆ ಹರಿದು ಬಂತು ಜನಸಾಗರ

ಅಪ್ಪಾಜಿ ಗೌಡರ ನಿಧನದ ಸುದ್ದಿ ತಿಳಿಯುತ್ತಿದ್ದಂತಯೇ ಭದ್ರಾವತಿಯ ಅವರ ಮನೆ ಮುಂದೆ ಜನ ಸಾಗರವೇ ಸೇರಿದೆ. ಪೊಲೀಸರು ಬ್ಯಾರಿಕೇಡ್ ಹಾಕಿ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದಾರೆ.

funeral of appaji gowda
ಅಪ್ಪಾಜಿ ಗೌಡರ ಅಂತಿಮ ದರ್ಶನಕ್ಕೆ ಹರಿದು ಬಂತು ಜನ ಸಾಗರ
author img

By

Published : Sep 3, 2020, 11:39 AM IST

ಶಿವಮೊಗ್ಗ: ಭದ್ರಾವತಿ ಜೆಡಿಎಸ್ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಗೌಡ ನಿನ್ನೆ ರಾತ್ರಿ ನಿಧನರಾಗಿದ್ದು, ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದೆ.

ಅಪ್ಪಾಜಿ ಗೌಡರ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ತರಲಾಗಿತ್ತು. ಬೆಡ್ ಕೊರತೆ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ನಂತರ ಕೋವಿಡ್ ಪರೀಕ್ಷೆ ನಡೆಸಿದ್ದು, ಕೊರೊನಾ ಇರುವುದು ದೃಢಪಟ್ಟಿದೆ. ಕೋವಿಡ್ ಸ್ಟಿಕ್ಕರ್ ಅಂಟಿಸಿ ಗೌಡರ ಪಾರ್ಥಿವ ಶರೀರವನ್ನು ಕುಟುಂಬಸ್ಥರಿಗೆ ನೀಡಲಾಗಿದೆ.

ಸಿಎಂ ತವರು ಜಿಲ್ಲೆಯಲ್ಲಿ ಮಾಜಿ ಶಾಸಕನಿಗೆ ಎದುರಾದ ಬೆಡ್​ ಸಮಸ್ಯೆ... ಕೊರೊನಾಗೆ ಅಪ್ಪಾಜಿ ಗೌಡ ಬಲಿ!

ಗೌಡರ ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ: ಅಪ್ಪಾಜಿ ಗೌಡರ ನಿಧನದ ಸುದ್ದಿ ತಿಳಿಯುತ್ತಿದ್ದಂತಯೇ ಭದ್ರಾವತಿಯ ಅವರ ಮನೆ ಮುಂದೆ ಜನಸಾಗರವೇ ಸೇರಿದೆ. ಅಂತಿಮ ದರ್ಶನಕ್ಕೆ ಮನೆಯ ಮುಂದೆ ಶಾಮಿಯಾನ ಹಾಕಿ ವ್ಯವಸ್ಥೆ ಮಾಡಲಾಗಿದೆ. ಭದ್ರಾವತಿ ಪಟ್ಟಣದಲ್ಲಿ ಟ್ರಾಫಿಕ್‌ ಜಾಮ್ ಉಂಟಾಗಿದೆ. ಪೊಲೀಸರು ಬ್ಯಾರಿಕೇಡ್ ಹಾಕಿ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದಾರೆ. ಗೋಣಿಬಿಡಿನ ಅವರ ತೋಟದಲ್ಲಿ ಶವ ಸಂಸ್ಕಾರ ಮಾಡಲಾಗುತ್ತದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.