ಶಿವಮೊಗ್ಗ: ಮಹಾತ್ಮ ಗಾಂಧೀಜಿ 151ನೇ ಜನ್ಮ ದಿನೋತ್ಸವದ ಅಂಗವಾಗಿ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ಸೈಕ್ಲೋಥಾನ್ ಮತ್ತು ವಾಕಥಾನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್ ಚಾಲನೆ ನೀಡಿದರು. ನಗರದ ಗಾಂಧಿ ಪಾರ್ಕ್ನಿಂದ ಪ್ರಾರಂಭವಾಗಿ ಹಳೇ ಜೈಲು ಆವರಣದವರೆಗೂ ಜಾಥಾ ನಡೆಯಿತು.
ಕಾರ್ಯಕ್ರಮದಲ್ಲಿ ಅನೇಕ ಸೈಕ್ಲಿಂಗ್ ಪಟುಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ, ಪಾಲಿಕೆ ಉಪ ಮೇಯರ್ ಸುರೇಖಾ ಮುರುಳಿಧರ್ ಹಾಜರಿದ್ದರು.