ETV Bharat / state

ಗಣೇಶ ಹಬ್ಬ ಹಿನ್ನೆಲೆ: ಜಿಲ್ಲೆಯಾದ್ಯಂತ ಸುರಕ್ಷತಾ ಕ್ರಮಕ್ಕೆ ಡಿಸಿ ಸೂಚನೆ

ಗಣೇಶ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದೆ ಸಂಭ್ರಮದಿಂದ ಹಬ್ಬವನ್ನು ಆಚರಿಸುವ ಸಲುವಾಗಿ ಜಿಲ್ಲೆಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

shimoga
author img

By

Published : Aug 30, 2019, 6:43 PM IST

ಶಿವಮೊಗ್ಗ: ಗಣೇಶ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದೆ ಸಂಭ್ರಮದಿಂದ ಹಬ್ಬವನ್ನು ಆಚರಿಸುವ ಸಲುವಾಗಿ ಜಿಲ್ಲೆಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು ಗಣೇಶ ಪೆಂಡಾಲ್‍ಗಳಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು. ಆಯಾ ಗಣೇಶ ಮಂಡಳಿಯವರು ಈ ಕಾರ್ಯದಲ್ಲಿ ಪೊಲೀಸರೊಂದಿಗೆ ಕೈ ಜೋಡಿಸಬೇಕು. ಮೆರವಣಿಗೆ ಸಾಗುವ ಹಾದಿಗಳಲ್ಲಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಮೆರವಣಿಗೆಗೆ ಹೊಸ ಮಾರ್ಗಗಳಲ್ಲಿ ಯಾವುದೇ ಕಾರಣಕ್ಕೂ ಅವಕಾಶ ಕಲ್ಪಿಸಬಾರದು. ಯಾವುದೇ ಹೊಸ ಪೆಂಡಾಲ್‍ಗಳಿಗೆ ಅನುಮತಿ ನೀಡಬಾರದು. ಈ ವಿಷಯದಲ್ಲಿ ಕರ್ತವ್ಯ ಲೋಪ ಎಸಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಮಹಾನಗರ ಪಾಲಿಕೆ ಹಾಗೂ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಪಾಡಲು ಹೆಚ್ಚಿನ ಗಮನ ನೀಡಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮೊಬೈಲ್, ಟಾಯ್ಲೆಟ್ ವ್ಯವಸ್ಥೆ ಮಾಡಬೇಕು. ಯಾವುದೇ ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ ಕೆಳಮಟ್ಟದಲ್ಲಿರುವ ವಿದ್ಯುತ್ ತಂತಿಗಳನ್ನು ಮೊದಲೇ ಗುರುತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮರಗಳ ಗೆಲ್ಲುಗಳನ್ನು ಸವರುವ ಅಗತ್ಯವಿದ್ದರೆ ಮೊದಲೇ ಕ್ಲಿಯರ್ ಮಾಡಬೇಕು ಎಂದು ಸೂಚನೆ ನೀಡಿದರು.

ಅಗ್ನಿಶಾಮಕ ದಳ ಸನ್ನದ್ಧ ಸ್ಥಿತಿಯಲ್ಲಿರಬೇಕು. ಪೆಂಡಾಲ್‍ಗಳಲ್ಲಿ ವಿದ್ಯುತ್ ಅವಘಡಗಳು ಸಂಭವಿಸದಂತೆ ಮೊದಲೇ ಪರಿಶೀಲನೆ ನಡೆಸಬೇಕು. ಅಂಬ್ಯುಲೆನ್ಸ್ ಮತ್ತು ವೈದ್ಯಾಧಿಕಾರಿಗಳ ತಂಡ ಸಹ ಸಜ್ಜಾಗಿರಬೇಕು. ಅಗತ್ಯ ಔಷಧಿ ಸಂಗ್ರಹ ಖಾತ್ರಿ ಪಡಿಸಬೇಕು. ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಶಾಂತಿಯುತವಾಗಿ ಗಣೇಶ ಹಬ್ಬ ಆಚರಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಹೇಳಿದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟನಿ ಮರಿಯಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Intro:ಶಿವಮೊಗ್ಗ,

ಗಣೇಶ ಹಬ್ಬ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಣೇಶ ಹಬ್ಬ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

ಗಣೇಶ ಪೆಂಡಾಲ್‍ಗಳಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು. ಆಯಾ ಗಣೇಶ ಮಂಡಳಿಯವರು ಈ ಕಾರ್ಯದಲ್ಲಿ ಪೊಲೀಸರೊಂದಿಗೆ ಕೈಜೋಡಿಸಬೇಕು. ಮೆರವಣಿಗೆ ಸಾಗುವ ಹಾದಿಗಳಲ್ಲಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಮೆರವಣಿಗೆಗೆ ಹೊಸ ಮಾರ್ಗಗಳಲ್ಲಿ ಯಾವುದೇ ಕಾರಣಕ್ಕೂ ಅವಕಾಶ ಕಲ್ಪಿಸಬಾರದು. ಯಾವುದೇ ಹೊಸ ಪೆಂಡಾಲ್‍ಗಳಿಗೆ ಅನುಮತಿ ನೀಡಬಾರದು. ಈ ವಿಷಯದಲ್ಲಿ ಕರ್ತವ್ಯ ಲೋಪ ಎಸಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಮಹಾನಗರ ಪಾಲಿಕೆ ಹಾಗೂ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಪಾಡಲು ಹೆಚ್ಚಿನ ಗಮನ ನೀಡಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು. ಯಾವುದೇ ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ ಕೆಳಮಟ್ಟದಲ್ಲಿರುವ ವಿದ್ಯುತ್ ತಂತಿಗಳನ್ನು ಮೊದಲೇ ಗುರುತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮರಗಳ ಗೆಲ್ಲುಗಳನ್ನು ಸವರುವ ಅಗತ್ಯವಿದ್ದರೆ ಮೊದಲೇ ಕ್ಲಿಯರ್ ಮಾಡಬೇಕು ಎಂದು ಸೂಚನೆ ನೀಡಿದರು.

ಅಗ್ನಿಶಾಮಕ ದಳ ಸನ್ನದ್ಧ ಸ್ಥಿತಿಯಲ್ಲಿರಬೇಕು. ಪೆಂಡಾಲ್‍ಗಳಲ್ಲಿ ವಿದ್ಯುತ್ ಅವಘಡಗಳು ಸಂಭವಿಸದಂತೆ ಮೊದಲೇ ಪರಿಶೀಲನೆ ನಡೆಸಬೇಕು. ಅಂಬ್ಯುಲೆನ್ಸ್ ಮತ್ತು ವೈದ್ಯಾಧಿಕಾರಿಗಳ ತಂಡ ಸಹ ಸಜ್ಜಾಗಿರಬೇಕು. ಅಗತ್ಯ ಔಷಧಿ ಸಂಗ್ರಹ ಖಾತ್ರಿಪಡಿಸಬೇಕು. ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಶಾಂತಿಯುತವಾಗಿ ಗಣೇಶ ಹಬ್ಬ ಆಚರಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ಅನುರಾಧ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟನಿ ಮರಿಯಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆಗಳನ್ನು ಈ ಸಂದರ್ಭದಲ್ಲಿ ನೀಡಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.