ಶಿವಮೊಗ್ಗ:ಗೀವ್ ಇಂಡಿಯಾ ಹಾಗೂ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ವತಿಯಿಂದ 68 ಲಕ್ಷ ಮೊತ್ತದ ಹತ್ತು ಲೀಟರ್ ಸಾಮರ್ಥ್ಯದ ಒಟ್ಟು 40 ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬೇಳೂರು ರಾಘವೇಂದ್ರ ಶೆಟ್ಟಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪನವರ ಮೂಲಕ ಜಿಲ್ಲಾಡಳಿತಕ್ಕೆ ದೇಣಿಗೆಯಾಗಿ ನೀಡಿದರು.
ಕೊರೊನಾ ಮೂರನೇ ಅಲೆಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ರೀತಿಯಲ್ಲಿ ಆಕ್ಸಿಜನ್ ಸಮಸ್ಯೆಯಾಗದಂತೆ ತಡೆಯಲು ಗೀವ್ ಇಂಡಿಯಾ ಹಾಗೂ ಮಹಾತ್ಮ ಸೇವಾ ಟ್ರಸ್ಟ್ ಸಂಸ್ಥೆಯ ವತಿಯಿಂದ 68 ಲಕ್ಷ ಮೊತ್ತದ ಒಟ್ಟು 40 ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ದೇಣಿಗೆಯಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್ ಈಶ್ವರಪ್ಪ, ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಅನುರಾಧ , ಆರೋಗ್ಯಾಧಿಕಾರಿ ರಾಜೇಶ್ ಸುರಗಿಹಳ್ಳಿ ಹಾಗೂ ಗೀವ್ ಇಂಡಿಯಾದ ಕರ್ನಾಟಕ ಸಿಎಸ್ಆರ್ ಸಲಹೆಗಾರರಾದ ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ:AIMIM ಜೊತೆ ಮೈತ್ರಿ ಇಲ್ಲ : BSP ಮುಖ್ಯಸ್ಥೆ ಮಾಯಾವತಿ ಸ್ಪಷ್ಟನೆ