ಶಿವಮೊಗ್ಗ: ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟ ಮೂರು ಕಂದಮ್ಮಗಳ ಕುಟುಂಬದವರಿಗೆ ಸರ್ಕಾರ ಪರಿಹಾರ ನೀಡಬೇಕು ಹಾಗೂ ವಲಸೆಗಾರರ ಮಕ್ಕಳ ಭದ್ರತೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಎರಡು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಬನ್ನೂರು ಠಾಣಾ ವ್ಯಾಪ್ತಿಯಲ್ಲಿ ಹೊಟ್ಟೆಪಾಡಿಗಾಗಿ ಕಬ್ಬು ಕಟಾವು ಮಾಡಲು ಹೋಗಿದ್ದ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ನಾಗಲಾಪುರ ತಾಂಡದ ಬಂಜಾರ ಕುಟುಂಬದ ಮೂರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಸರ್ಕಾರ ಈ ಕುಟುಂಬಗಳಿಗೆ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿ ಮನವಿ ನೀಡಿದರು.