ಶಿವಮೊಗ್ಗ: ಸರ್ಕಾರಿ ಶಾಲೆಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳೆಂದು ದೂರುವವರ ಸಂಖ್ಯೆಯೇ ಹೆಚ್ಚಾಗಿರುವ ಈ ಕಾಲಘಟ್ಟದಲ್ಲಿ ಸಾಗರ ತಾಲೂಕಿನ ತುಮರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಳಿಗೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯಕ್ಕೆ ಬಾಗಿಲು ಇಲ್ಲದೇ, ಸೀರೆ ಕಟ್ಟಿ ಮಕ್ಕಳ ಬಳಕೆಗೆ ಅನುವು ಮಾಡಿಕೊಡಲಾಗಿದೆ.
ಈ ಶಾಲೆಗೆ ಏಳಿಗೆ ಹಾಗೂ ಪಕ್ಕದ ಕಿರತೋಡಿ ಗ್ರಾಮ ಸೇರಿದಂತೆ ಒಟ್ಟು 13 ಮಕ್ಕಳು ಆಗಮಿಸುತ್ತಾರೆ. ಶಾಲಾ ಕಟ್ಟಡ ಹಳೆಯದಾಗಿದ್ದು, ದುಸ್ಥಿತಿಗೆ ತಲುಪಿದೆ. ಅಲ್ಲದೇ, ಶೌಚಾಲಯದ ಬಾಗಿಲು ಕಿತ್ತು ಹೋಗಿ ವರ್ಷಗಳೇ ಕಳೆದಿವೆ.
ಶಾಲೆಗೆ ಖಾಯಂ ಶಿಕ್ಷಕರಿಲ್ಲ, ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಕುರಿತು ಶಾಲೆಯ ಎಸ್ಡಿಎಂಸಿ ಸದಸ್ಯರು ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ರೂ ಸಹ ಪ್ರಯೋಜನವಾಗಿಲ್ಲ ಎಂಬ ಮಾತುಗಳು ಕೇಳಿಬಂದಿವೆ.
ಇದನ್ನೂ ಓದಿ: ಜೀವ ಕೈಯಲ್ಲಿ ಹಿಡಿದು ಮಕ್ಕಳ ವಿದ್ಯಾಭ್ಯಾಸ.. ಸ್ವಾತಂತ್ರ್ಯಪೂರ್ವದ ಶಾಲೆಗೆ ಬೇಕಿದೆ ಕಾಯಕಲ್ಪ