ಶಿವಮೊಗ್ಗ: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಎದುರಿಸುತ್ತಿರುವ ಶಿಕ್ಷಕರ ಹಾಗೂ ವಿವಿಧ ಸಮಸ್ಯೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕೆಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷ ನಾರಾಯಣ ಒತ್ತಾಯಿಸಿದರು.
ವಿದ್ಯಾರ್ಥಿಗಳು ಶಿಕ್ಷಕರ, ಉಪನ್ಯಾಸಕರ ಕೊರತೆಯಿಂದ ಶೈಕ್ಷಣಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಠಿಣ ಕ್ರಮಗಳ ಅಗತ್ಯವಿದೆ. ಹಾಗೇ ಬೋಧಕ-ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕೆಂದು ಪತ್ರಿಕಾಗೋಷ್ಟಿಯಲ್ಲಿ ಅವರು ಹೇಳಿದರು.
ಸರ್ಕಾರಿ ಶಾಲಾ-ಕಾಲೇಜಿನ ಜೊತೆಗೆ ಹಾಸ್ಟೆಲ್‌ಗಳ ದುಸ್ಥಿತಿಗಳ ಬಗ್ಗೆ ನಿಗಾ ವಹಿಸಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸಂಖ್ಯೆ ಹೆಚ್ಚಿಸಬೇಕು. ರಾಜ್ಯದ ಶಿಕ್ಷಣದ ಸಮಗ್ರ ದೃಷ್ಟಿಕೋನ ಬದಲಾಗಬೇಕಾಗಿದೆ. ಶಿಕ್ಷಣದ ಹೊಸ ನೀತಿ ರೂಪಿಸಬೇಕು ಎಂದು ಹರ್ಷ ಒತ್ತಾಯಿಸಿದರು.