ETV Bharat / state

ಕುವೆಂಪು ವಿವಿ ಘಟಿಕೋತ್ಸವಕ್ಕೆ ರಾಜ್ಯಪಾಲರ ಸಮ್ಮತಿ: ಜುಲೈ ಅಂತ್ಯದಲ್ಲಿ ನಡೆಯುವ ಸಾಧ್ಯತೆ! - Shimogga news

ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವ ಕೋವಿಡ್-19 ಕಾರಣದಿಂದ ವಿಳಂಬವಾಗಿದೆ. ಇದನ್ನು ನಡೆಸಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಜುಲೈ 28 ಅಥವಾ 29ರಂದು ಆಂತರಿಕವಾಗಿ ಘಟಿಕೋತ್ಸವ ಆಯೋಜಿಸಲು ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಿಳಿಸಿದ್ದಾರೆ.

ಕುವೆಂಪು ವಿವಿ ಘಟಿಕೋತ್ಸವ
ಕುವೆಂಪು ವಿವಿ ಘಟಿಕೋತ್ಸವ
author img

By

Published : Jul 10, 2020, 7:20 PM IST

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ನಡೆಸಲು ರಾಜ್ಯಪಾಲರು ಸಮ್ಮತಿಸಿದ್ದು, ಜಿಲ್ಲಾಧಿಕಾರಿಗಳು ಅನುಮತಿಸಿದಲ್ಲಿ ಜುಲೈ 28 ಅಥವಾ 29ರಂದು ಆಂತರಿಕವಾಗಿ ಘಟಿಕೋತ್ಸವ ಆಯೋಜಿಸಲು ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಿಳಿಸಿದ್ದಾರೆ.

ನಿನ್ನೆ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವ ಕೋವಿಡ್-19 ಕಾರಣದಿಂದ ವಿಳಂಬವಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಸಲ್ಲಿಸಿದ ಮನವಿಗೆ ಸ್ಪಂದಿಸಿದ ರಾಜ್ಯಪಾಲ ವಜುಭಾಯ್​​ ವಾಲಾ ಅವರು ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಘಟಿಕೋತ್ಸವ ಆಯೋಜಿಸಲು ಸಮ್ಮತಿ ಸೂಚಿಸಿದ್ದಾರೆ. ಹಾಗಾಗಿ ಈ ತಿಂಗಳ ಅಂತ್ಯದ ವೇಳೆಗೆ ಘಟಿಕೋತ್ಸವ ಆಯೋಜಿಸಲು ಸಿಂಡಿಕೇಟ್ ಸದಸ್ಯರು ಸಹಮತ ವ್ಯಕ್ತಪಡಿಸಿದ್ದಾರೆ. ಘಟಿಕೋತ್ಸವ ನಡೆಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಅವರು ಅನುಮತಿ ನೀಡಿದರೆ ಘಟಿಕೋತ್ಸವ ನಡೆಸಲಾಗುವುದು ಎಂದರು.

ಸಿಂಡಿಕೇಟ್ ಸಭೆ
ಸಿಂಡಿಕೇಟ್ ಸಭೆ

ಆಂತರಿಕ ಘಟಿಕೋತ್ಸವ:

ಕೋವಿಡ್ ಸೋಂಕು ದಿನೇ ದಿನೆ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿಗಳು ಅನುಮತಿಸಿದಲ್ಲಿ ಈ ಬಾರಿಯ ಘಟಿಕೋತ್ಸವವನ್ನು ಇನ್ ಹೌಸ್ ಮಾದರಿಯಲ್ಲಿ (ಆಂತರಿಕವಾಗಿ) ಆಯೋಜಿಸಲಾಗುವುದು. ಸುಮಾರು ಒಂದು ಸಾವಿರ ಸಭಿಕರು ಭಾಗವಹಿಸಬಹುದಾದ ವಿಶ್ವವಿದ್ಯಾಲಯದ ಹೊಸ ಘಟಿಕೋತ್ಸವ ಸಭಾಂಗಣದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಸರ್ಕಾರದ ನಿಯಮಗಳ ಅನ್ವಯ ಘಟಿಕೋತ್ಸವವನ್ನು ನಡೆಸಲಾಗುವುದು. ರ‍್ಯಾಂಕ್ ವಿಜೇತರು, ಪಿಹೆಚ್‍ಡಿ ಪದವೀಧರರು, ಗೌರವ ಡಾಕ್ಟರೇಟ್ ಪಡೆದವರು, ಸಿಂಡಿಕೇಟ್ ಸದಸ್ಯರು, ಶೈಕ್ಷಣಿಕ ಮಂಡಳಿ ಸದಸ್ಯರು ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿ ಒಳಗೊಂಡಂತೆ ಸುಮಾರು 500 ಮಂದಿ ಮಾತ್ರ ಭಾಗವಹಿಸಲು ಅವಕಾಶ ನೀಡಬಹುದಾಗಿದೆ. ಪೋಷಕರು ಮತ್ತು ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ತಿಳಿಸಿದರು.

ಜೇಷ್ಠತಾ ಪಟ್ಟಿಗೆ ಅನುಮೋದನೆ:

ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಜೇಷ್ಠತೆಗೆ ಸಂಬಂಧಿಸಿದಂತೆ ಜನವರಿ 20, 2020ರಂದು ಅಂತರ್ಜಾಲದಲ್ಲಿ ಪ್ರಕಟಿಸಿದ ಜೇಷ್ಠತಾ ಪಟ್ಟಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಜೊತೆಗೆ ಇದಕ್ಕೆ ಸಂಬಂಧಿಸಿದ ಬಡ್ತಿ ಮತ್ತು ವೇತನ ಸವಲತ್ತುಗಳನ್ನು ಸಹ ಪರಿಗಣಿಸಿ ಕೂಡಲೇ ಅರ್ಹ ಸಿಬ್ಬಂದಿಗೆ ಒದಗಿಸಬೇಕೆಂದು ತೀರ್ಮಾನ ಕೈಗೊಳ್ಳಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.