ಶಿವಮೊಗ್ಗ: ಸಾಗರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸಾಗರ ನಗರಸಭೆ ವತಿಯಿಂದ ನಡೆದ ಪೌರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಾಗರ ತಾಲೂಕಿನಲ್ಲಿನ ಜೋಗ ಜಲಪಾತದ ಸಮಗ್ರ ಅಭಿವೃದ್ಧಿಗೆ ಈಗಾಗಲೇ 120 ಕೋಟಿ ರೂ. ಯೋಜನೆ ರೂಪಿಸಲಾಗಿದೆ. ಇದರಿಂದ ಜೋಗಕ್ಕೆ ಸಾವಿರಾರು ಪ್ರವಾಸಿಗರನ್ನು ಸೆಳೆಯಲು ಅನುಕೂಲಕರವಾಗಲಿದೆ. ಸಾಗರ-ಸೊರಬ ರಸ್ತೆ ಅಗಲೀಕರಣಕ್ಕೆ 60 ಕೋಟಿ ರೂ. ಬೇಡಿಕೆ ಇಡಲಾಗಿದೆ. ಸದ್ಯ ಇದಕ್ಕೆ 30 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸಿಗದ ರಿಲೀಫ್: ಮತ್ತೆ 14 ದಿನ ನ್ಯಾಯಾಂಗ ಬಂಧನ
ಸಾಗರ ನಗರದ ಕುಡಿಯುವ ನೀರಿನ ಯೋಜನೆಗೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದರು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಹಾಲಪ್ಪರವರಿಗೂ ಸನ್ಮಾನ ಮಾಡಲಾಯಿತು.