ಶಿವಮೊಗ್ಗ: ಸ್ಥಳೀಯ ಸರ್ಕಾರಗಳೆಂದು ಕರೆಯಲ್ಪಡುವ ಗ್ರಾಮ ಪಂಚಾಯಿತಿ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ಮೊದಲ ಹಂತದ ಚುನಾವಣೆಗೆ ಜಿಲ್ಲೆಯಲ್ಲಿ ಅಂತಿಮವಾಗಿ 3,298 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಶಿವಮೊಗ್ಗ ಉಪ ವಿಭಾಗಗಳಾದ ಶಿವಮೊಗ್ಗ, ಭದ್ರಾವತಿ ಹಾಗೂ ತೀರ್ಥಹಳ್ಳಿ ತಾಲೂಕುಗಳಲ್ಲಿ ಡಿ.22 ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಸುಮಾರು 113 ಗ್ರಾಮ ಪಂಚಾಯಿತಿಗಳಿಗೆ ಎಲೆಕ್ಷನ್ ನಡೆಯಲಿದೆ. 113 ಗ್ರಾಮ ಪಂಚಾಯಿತಿಗಳಲ್ಲಿ 1,212 ಕ್ಷೇತ್ರಗಳಿದ್ದು, ಇದರಲ್ಲಿ ಎರಡು ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಯಾಗಿಲ್ಲ. ಇದರಲ್ಲಿ 82 ಜನ ಅವಿರೋಧ ಆಯ್ಕೆಯಾಗಿದ್ದಾರೆ. ಸದ್ಯ 1,130 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಂತಿಮವಾಗಿ 3,298 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಓದಿ : ರೈತರ ಪ್ರತಿಭಟನೆ ವಿಚಾರದಲ್ಲಿ ಫೋಗಟ್ ಸಹೋದರಿಯರ ಕುಸ್ತಿ!
ಪರಿಶಿಷ್ಟ ಜಾತಿ- 813 ಜನ, ಪ.ಪಂಗಡ- 243, ಹಿಂದುಳಿದ ಅ.ವರ್ಗ- 376, ಹಿಂದುಳಿದ ಬಿ ವರ್ಗ- 70, ಸಾಮಾನ್ಯ ಕ್ಷೇತ್ರ- 1796 ಸೇರಿ ಒಟ್ಟು 3,298 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈಗಾಗಲೇ ಅಭ್ಯರ್ಥಿಗಳಿಗೆ ಚಿಹ್ನೆ ಸಹ ಲಭ್ಯವಾಗಿದ್ದು, ಅಭ್ಯರ್ಥಿಗಳು ಭರ್ಜರಿಯಾಗಿ ಪ್ರಚಾರ ನಡೆಸುತ್ತಿದ್ದಾರೆ. ದೆಹಲಿ ರಾಜಕೀಯಕ್ಕಿಂತ ಹಳ್ಳಿ ರಾಜಕೀಯ ಕುತೂಹಲ ಕೆರಳಿಸಿದೆ.