ಶಿವಮೊಗ್ಗ: ಇಂದಿನಿಂದ ರಾಜ್ಯದಲ್ಲಿ ಕೊರೂನಾ ಕರ್ಫ್ಯೂ ಪ್ರಾರಂಭವಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 10ರ ವರೆಗೆ ಮಾತ್ರ ಅವಕಾಶ ನೀಡಲಾಗಿದೆ. 10 ಗಂಟೆಯ ನಂತರ ಜನರ ಓಡಾಟಕ್ಕೆ ಅವಕಾಶವಿಲ್ಲ.
ಆದರೂ ನಗರದಲ್ಲಿ ಜನತೆ ರಸ್ತೆಗಿಳಿಯುತ್ತಿರುವ ದೃಶ್ಯ ಸಾಮಾನ್ಯ ಎನ್ನುವಂತಾಗಿದೆ. ಬೈಕ್ ಹಾಗೂ ಕಾರುಗಳಲ್ಲಿ ಓಡಾಡುವುದನ್ನ ನಿಲ್ಲಿಸಿಲ್ಲ. ಇದರಿಂದ ಪೊಲೀಸರು ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಜನರನ್ನು ತಡೆಯುವ ಕೆಲಸ ಮಾಡುತ್ತಿದ್ದಾರೆ.
ಹೀಗಾಗಿ ಪೊಲೀಸರು ಅಗತ್ಯ ಕೆಲಸಗಳಿಗೆ ತೆರಳುವವರನ್ನು ಹೊರತುಪಡಿಸಿ ಉಳಿದೆಲ್ಲ ವಾಹನಗಳನ್ನು ತಡೆದು ನಿಲ್ಲಿಸುತ್ತಿದ್ದಾರೆ. ಅಲ್ಲದೇ ಕರ್ಫ್ಯೂ ಸಮಯದಲ್ಲಿ ಮನೆಯಿಂದ ಹೊರಬರದಂತೆ ತಿಳಿ ಹೇಳುತ್ತಿದ್ದಾರೆ. ಇನ್ನೂ ಕೆಲವರಿಗೆ ಪೊಲೀಸರು ದಂಡ ಹಾಕಿ ಕಳುಹಿಸುತ್ತಿದ್ದಾರೆ.
ಮತ್ತೊಂದೆಡೆ ಹಗಲು ರಾತ್ರಿ ಕರ್ತವ್ಯ ನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸ್ಗೆ ಎನ್ಎಸ್ಯುಐ ಕಾರ್ಯಕರ್ತರು ಹಣ್ಣು, ನೀರು ನೀಡಿ ನೆರವಾಗುತ್ತಿದ್ದಾರೆ.