ಶಿವಮೊಗ್ಗ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪದವಿ ಕಾಲೇಜು ಅಥಿತಿ ಉಪನ್ಯಾಸಕರ ಸಮನ್ವಯ ಸಮಿತಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.
ನಗರದ ಪ್ರವಾಸಿ ಮಂದಿರದಲ್ಲಿ ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲಾ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಪದಾಧಿಕಾರಿಗಳ ತಂಡ ಸಿಎಂಗೆ ಮನವಿ ಪತ್ರ ಸಲ್ಲಿಸಿತು.
ಅತಿಥಿ ಉಪನ್ಯಾಸಕರ ಸಮಸ್ಯೆಗಳ ಕುರಿತು ಹಾಗೂ ಸೇವಾಭದ್ರತೆ ಮತ್ತು ಲಾಕ್ ಡೌನ್ ಅವಧಿಯ ವೇತನ ಬಿಡುಗಡೆಗೆ ಸಂಬಂಧಿಸಿದಂತೆ ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಬೇಡಿಕೆ ಈಡೇರಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಮಿತಿಯ ಡಾ. ಸೋಮಶೇಖರ್ ಶಿವಮೊಗ್ಗಿ, ದಾವಣಗೆರೆಯ ಡಾ.ಪ್ರಶಾಂತ ಶರ್ಮ,ಹೊನ್ನಾಳಿ ತಾ. ಅಧ್ಯಕ್ಷ ಹಳದಪ್ಪ, ಶಿವಮೊಗ್ಗ ಜಿಲ್ಲಾ ಕಾರ್ಯದರ್ಶಿ ಸತೀಶ್, ಇತರರು ಉಪಸ್ಥಿತರಿದ್ದರು.