ETV Bharat / state

ಅಥಿತಿ ಉಪನ್ಯಾಸಕರ ವಿವಿಧ ಬೇಡಿಕೆ ಈಡೆರಿಸುವಂತೆ ಸಚಿವರಿಗೆ ಮನವಿ - Recruitment process for lecturers

ಅಥಿತಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಮತ್ತು ಲಾಕ್​​ಡೌನ್ ಅವಧಿಯ ವೇತನವನ್ನು ಬಿಡುಗಡೆಗೊಳಿಸಬೇಕೆಂದು ಅತಿಥಿ ಉಪನ್ಯಾಸಕರು ಮನವಿ ಮಾಡಿಕೊಳ್ಳುತ್ತಲೇ ಬಂದಿದ್ದು, ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಪತ್ರ ನೀಡಲಾಗಿದೆ. ಈ ಮೂಲಕ ವಿವಿಧ ಬೇಡಿಕೆಗಳ ಈಡೇರಿಸುವಂತೆ ಪತ್ರದ ಮೂಲಕ ಮನವಿ ಮಾಡಲಾಗಿದೆ.

guest lecturers appeals to minister for the various demands
ಅಥಿತಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೆರಿಸುವಂತೆ ಸಚಿವರಿಗೆ ಮನವಿ
author img

By

Published : Aug 25, 2020, 5:46 PM IST

ಶಿವಮೊಗ್ಗ: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ ಸೇವೆಯಲ್ಲಿರುವ ಅಥಿತಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಮತ್ತು ಲಾಕ್​​ಡೌನ್ ಅವಧಿಯ ವೇತನವನ್ನು ಬಿಡುಗಡೆಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.

ಹತ್ತಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊರೊನಾ ಮಹಾಮಾರಿಯಿಂದ ಕೆಲಸವು ಇಲ್ಲದೇ ವೇತನವು ಇಲ್ಲದೇ, ಕುಟುಂಬ ನಿರ್ವಹಣೆ ಹೊರೆಯಾಗುತ್ತಿದೆ. ಹೀಗಾಗಿ ಸರ್ಕಾರ ಲಾಕ್​ಡೌನ್ ಅವಧಿಯನ್ನು ಸೇವಾ ಅವಧಿಯೆಂದು ಪರಿಗಣಿಸಿ ವೇತನ ಬಿಡುಗಡೆ ಮಾಡಬೇಕು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಮನವಿ ಪತ್ರ ನೀಡುತ್ತಿರುವುದು

ಅಲ್ಲದೆ ಹೊಸದಾಗಿ ಹೊರಡಿಸಿರುವ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಯಿತು.

ಇದಲ್ಲದೆ ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಬೇಕು ಎಂಬ ಮನವಿಯಲ್ಲದೆ, ವಿವಿಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.