ಶಿವಮೊಗ್ಗ: ಅತಿಥಿ ಶಿಕ್ಷಕರ ಸಮಸ್ಯೆಗಳನ್ನು ನಿವಾರಿಸುವ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಂಘದಿಂದ ಸೊರಬದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅತಿಥಿ ಶಿಕ್ಷಕರ ಬದುಕು ಸೋಚನಿಯವಾಗಿದೆ. ಇತ್ತೀಚಿನ ದಿನಗಳಲ್ಲಿ ಜೀವನ ನಡೆಸುವುದು ಸಹ ಕಷ್ಟವಾಗುತ್ತಿದೆ. ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಬದುಕೇ ಕಷ್ಟದಲ್ಲಿದೆ. ಹಾಗಾಗಿ ರಾಜ್ಯದ ಎಲ್ಲಾ ಅತಿಥಿ ಶಿಕ್ಷಕರಿಗೂ ಸೇವಾ ಭದ್ರತೆ ನೀಡಿ. ದೆಹಲಿ ,ಹರಿಯಾಣ ಮತ್ತು ಉತ್ತರ ಪ್ರದೇಶ ಮಾದರಿಯಲ್ಲಿ ಅತಿಥಿ ಶಿಕ್ಷಕರ ಬಗ್ಗೆ ನಿರ್ಣಯ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಮಹಿಳಾ ಶಿಕ್ಷಕಿಯರಿಗೆ ವೇತನ ಸಹಿತ ಹೆರಿಗೆ ಸೌಲಭ್ಯ ಮಂಜೂರು ಮಾಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಸಮಯಕ್ಕೆ ಸರಿಯಾಗಿ ವೇತನ ಪಾವತಿಸಬೇಕು. ಮುಂದಿನ ಶೈಕ್ಷಣಿಕ ವರ್ಷಕ್ಕೂ ನಮ್ಮನ್ನೆ ಕರ್ತವ್ಯದಲ್ಲಿ ಮುಂದುವರಿಸಬೇಕು ಎಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ಮೂಲಕ ಮನವಿ ಮಾಡಿದರು.