ETV Bharat / state

ಹರ್ಷ ಕೊಲೆ ಪ್ರಕರಣ: ಪ್ರಚೋದನಾತ್ಮಕ ಹೇಳಿಕೆ ಆರೋಪದಡಿ ಈಶ್ವರಪ್ಪ ವಿರುದ್ಧ ಎಫ್​ಐಆರ್​ - ಶಿವಮೊಗ್ಗದ ಹರ್ಷ ಕೊಲೆ ಪ್ರಕರಣ

ದೊಡ್ಡಪೇಟೆ ಪೊಲೀಸ್​ ಠಾಣೆಯಲ್ಲಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ಧ ಎಫ್​ಆರ್​ಐ ದಾಖಲಾಗಿದೆ. ಜತೆಗೆ ಬಿಜೆಪಿ ಕಾರ್ಪೊರೇಟರ್​ ಚನ್ನಬಸಪ್ಪ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ಧ ಎಫ್​ಆರ್​ಐ

author img

By

Published : Apr 8, 2022, 1:45 PM IST

Updated : Apr 8, 2022, 7:14 PM IST

ಶಿವಮೊಗ್ಗ: ಭಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಪಟ್ಟಂತೆ ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದಡಿ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್​ ಠಾಣೆಯಲ್ಲಿ ಎಫ್​ಆರ್​ಐ ದಾಖಲಾಗಿದೆ. ಜತೆಗೆ ಬಿಜೆಪಿ ಕಾರ್ಪೊರೇಟರ್​ ಚನ್ನಬಸಪ್ಪ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಚೋದನಾತ್ಮಕ ಹೇಳಿಕೆ ಆರೋಪದಡಿ ಈಶ್ವರಪ್ಪ ವಿರುದ್ಧ ಎಫ್​ಐಆರ್​

ಶಿವಮೊಗ್ಗದ ರಿಯಾಜ್​ ಅಹ್ಮದ್​ ಎಂಬುವರು ನೀಡಿದ ದೂರಿನ ಮೇರೆಗೆ ಈ ಎಫ್ಐಆರ್​ ದಾಖಲಾಗಿದೆ. ಹರ್ಷ ಹತ್ಯೆಯ ನಂತರ ಹಿಂಸಾಚಾರ ನಡೆದಿತ್ತು. ಸಚಿವ ಈಶ್ವರಪ್ಪ ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರಿಯಾಜ್​ ಅಹ್ಮದ್ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಆದರೆ, ಮೊದಲು ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ, ಅವರು ಹೈಕೋರ್ಟ್​​ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ನಿರ್ದೇಶನದಂತೆ ಪೊಲೀಸರು, ಎಫ್ಐಆರ್​ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ. ಈ ಬಗ್ಗೆ ಪ್ರತಿತಿಕ್ರಿಯೇ ನೀಡಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಣ್ಮೀ ಪ್ರಸಾದ್ , ನ್ಯಾಯಾಲಯದ ನಿರ್ದೇಶನದಂತೆ ಖಾಸಗಿ ದೂರನ್ನು ದಾಖಲಿಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಿಂಕೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೈಕ್ ಅಪಘಾತ : ಬಿಜೆಪಿ ಎಸ್ಸಿ ಮೋರ್ಚಾದ ಕಾರ್ಯದರ್ಶಿ ಸಾವು

Last Updated : Apr 8, 2022, 7:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.