ಶಿವಮೊಗ್ಗ : ಸಂತೋಷ ಪಾಟೀಲ್ ಆತ್ಮಹತ್ಯೆ ವಿಚಾರದಲ್ಲಿ ರಾಜೀನಾಮೆ ನೀಡಬೇಕೆಂದು ಸಚಿವ ಈಶ್ವರಪ್ಪನವರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾದರು. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.
ಸಚಿವ ಈಶ್ವರಪ್ಪ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮುಗಿಸಿ ವಾಪಸ್ ಆಗುವಾಗ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಅದೇ ವೇಳೆ ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಬಂದು ತೀವ್ರ ವಿರೋಧ ವ್ಯಕ್ತಡಿಸಿದರು. ಆಗ ಕೆಲ ಕಾಲ ಗೊಂದಲಮಯ ವಾತಾವರಣ ಉಂಟಾಗಿತ್ತು.
ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಮ್ಮ ಬಸ್ಗೆ ಹತ್ತಿಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ಬಸ್ ಮುಂದೆ ನಿಂತು ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಎರಡು ಪಕ್ಷದ ಕಾರ್ಯಕರ್ತರು ಏಕ ವಚನದಲ್ಲಿಯೇ ಈ ವೇಳೆ ಬೈದಾಡಿಕೊಂಡರು.
ಇದನ್ನೂ ಓದಿ: ಸಿಎಂ ಸರ್ಕಾರಿ ನಿವಾಸಕ್ಕೆ ಮುತ್ತಿಗೆ, ನಾಳೆಯಿಂದ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ