ETV Bharat / state

ಸಮಾನ ಕೆಲಸಕ್ಕೆ ಸಮಾನ ವೇತನ.. ಗುತ್ತಿಗೆ - ಹೊರ ಗುತ್ತಿಗೆ ನೌಕರರ ಸಂಘದಿಂದ ಒತ್ತಾಯ

author img

By

Published : Oct 5, 2020, 4:21 PM IST

ಕೊರೊನಾ ಸಂದರ್ಭದಲ್ಲಿ ಮೃತಪಟ್ಟ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಕುಟುಂಬಗಳಿಗೆ ₹50 ಲಕ್ಷ ಪರಿಹಾರ ಮತ್ತು ಅನುಕಂಪದ ಆಧಾರದಲ್ಲಿ ಕುಟುಂಬಗಳ ಸದಸ್ಯರಿಗೆ ಸರ್ಕಾರಿ ನೌಕರಿಯನ್ನು ನ್ಯಾಯಸಮ್ಮತವಾಗಿ ನೀಡಬೇಕು..

Health_Department staffs protest in shimoga
ಗುತ್ತಿಗೆ- ಹೊರ ಗುತ್ತಿಗೆ ನೌಕರರ ಸಂಘ

ಶಿವಮೊಗ್ಗ : ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ಜಿಲ್ಲಾ ಪಂಚಾಯತ್ ಕಚೇರಿ ಎದುರು ಪ್ರತಿಭಟಿಸಿದರು.

ಗುತ್ತಿಗೆ- ಹೊರ ಗುತ್ತಿಗೆ ನೌಕರರ ಸಂಘದಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ

ಕೋವಿಡ್​ ಸಂದರ್ಭದಲ್ಲಿ ವಾರಿಯರ್ಸ್‌ಗಳಾಗಿ ಸೇವೆ ಸಲ್ಲಿಸಿದ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರಿಗೆ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಕೂಡಲೇ ಇದನ್ನು ಸರಿಪಡಿಸಿ ಎಂದು ಒತ್ತಾಯಿಸಿದರು. ಕೊರೊನಾ ಸಂದರ್ಭದಲ್ಲಿ ಮೃತಪಟ್ಟ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಕುಟುಂಬಗಳಿಗೆ ₹50 ಲಕ್ಷ ಪರಿಹಾರ ಮತ್ತು ಅನುಕಂಪದ ಆಧಾರದಲ್ಲಿ ಕುಟುಂಬಗಳ ಸದಸ್ಯರಿಗೆ ಸರ್ಕಾರಿ ನೌಕರಿಯನ್ನು ನ್ಯಾಯಸಮ್ಮತವಾಗಿ ನೀಡಬೇಕು.

ಕೋವಿಡ್ ಆಪತ್ತು ಪ್ರೋತ್ಸಾಹಧನವನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ಕೋವಿಡ್ ವಾರಿಯರ್ಸ್‌ಗೂ ವಿಸ್ತರಿಸುವುದರ ಜೊತೆಗೆ ಒಂದು ತಿಂಗಳ ಹೆಚ್ಚುವರಿ ವೇತನ ಜಾರಿಗೊಳಿಸಿ ನೌಕರರ ಆತ್ಮಸ್ಥೈರ್ಯ ಹೆಚ್ಚಿಸಬೇಕು ಎಂದು ಆಗ್ರಹಿಸಿದರು. ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆಯನ್ನೊಳಗೊಂಡಂತೆ 14 ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.