ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ನಿರಂತರ ಮಳೆಯಿಂದ ಆಗುಂಬೆ ಘಾಟಿ ರಸ್ತೆಯ ಹಲವೆಡೆಗಳಲ್ಲಿ ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ 12 ಟನ್ಗಿಂತಲೂ ಹೆಚ್ಚು ಭಾರ ಹೊತ್ತು ಸಂಚರಿಸುವ ವಾಹನನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಮಳೆಗಾಲ ಮುಗಿಯುವವರೆಗೂ ಈ ಮಾರ್ಗದಲ್ಲಿ ಭಾರಿ ವಾಹನಗಳು ಸಂಚರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.
ಇನ್ನುಳಿದಂತೆ ಮಿನಿ ಬಸ್, ಕಾರು, ಜೀಪ್, ಬೈಕ್ಗಳ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.