ETV Bharat / state

ಶಿವಮೊಗ್ಗದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಗೆ ಅಪಾರ ಹಾನಿ: ಬಿಜೆಪಿ‌ ಸಂಸದ, ಶಾಸಕರು ಪುಲ್ ಅಲರ್ಟ್ - ಶಿವಮೊಗ್ಗ ಜಿಲ್ಲೆಯಲ್ಲಿ ಭೀಕರ ಮಳೆ

ಜಿಲ್ಲಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯೂ ಕೂಡ ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗದ ಜನಪ್ರತಿನಿಧಿಗಳು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.
author img

By

Published : Aug 9, 2019, 11:08 PM IST

ಶಿವಮೊಗ್ಗ: ಜಿಲ್ಲಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯೂ ಕೂಡ ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗದ ಜನಪ್ರತಿನಿಧಿಗಳು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆ ಸುರಿದಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಸಾವಿರಾರು ಎಕರೆ ಕೃಷಿ ಭೂಮಿ ನೀರಿನಿಂದ ಆವೃತವಾಗಿದೆ. ಅಲ್ಲದೆ ನೂರಾರು ಮನೆಗಳು ನೆಲ ಸಮವಾಗಿವೆ. ಜಿಲ್ಲೆಯಲ್ಲಿ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದು, ಹಲವು ಜಾನುವಾರುಗಳು ಪ್ರಾಣ ಕಳೆದು ಕೊಂಡಿವೆ.

ಇನ್ನು ರಸ್ತೆ ಕುಸಿತ ಉಂಟಾಗಿ ಜಿಲ್ಲೆಯ ಹೊಸನಗರ ಭಾಗದಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿವೆ. ಶಿವಮೊಗ್ಗ ನಗರದಲ್ಲಿ ತುಂಗಾ ನದಿಯ ಪ್ರವಾಹ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಹಲವು ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆಯಿಂದ ಸಾಕಷ್ಟು ಕಡೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಬಿಜೆಪಿ‌ ಶಾಸಕರು ಪುಲ್ ಅಲರ್ಟ್ ಆಗಿದ್ದಾರೆ. ಇವರ ಜೊತೆ ಸಂಸದ ಬಿ.ವೈ. ರಾಘವೇಂದ್ರ ಸಹ ಅಲರ್ಟ್ ಆಗಿದ್ದಾರೆ.

ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ತಮ್ಮ ಕ್ಷೇತ್ರದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಾಗರ ಶಾಸಕ ಹರತಾಳು ಹಾಲಪ್ಪ ಸಹ ತಮ್ಮ ಕ್ಷೇತ್ರದಲ್ಲಿ ಹಲವು ಗ್ರಾಮಗಳಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ರಾಹ್ಮಣ ಬೇದೂರು ಗ್ರಾಮದಲ್ಲಿ ಚಕ್ರಪಾಣಿ ಎಂಬುವವರ ಮನೆ ಬಿದ್ದಿದನ್ನು ನೋಡಿ‌ ಅಧಿಕಾರಿಗಳಿಗೆ ಸೂಕ್ತ ಪರಿಹಾರಕ್ಕೆ ಸೂಚಿಸಿದ್ದಾರೆ.

ಹೊಸನಗರ ತಾಲೂಕು ಪಂಚಾಯಿತಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಮಳೆ ಹಾನಿ ಸಭೆ ನಡೆಸಿ, ಅಂದಾಜು‌ ಹಾನಿಯ ಮಾಹಿತಿ ಪಡೆದು ಕೊಂಡಿದ್ದಾರೆ. ಅಲ್ಲದೆ ಸೊರಬ ಶಾಸಕ‌ ಕುಮಾರ ಬಂಗಾರಪ್ಪ ಸಹ ತಮ್ಮ ಕ್ಷೇತ್ರದ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಾಲೂಕಿನ ಬಂಕಣಸಾಣದಲ್ಲಿ ನಿರ್ಮಿಸಿರುವ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ, ನಿರಾಶ್ರಿತರಿಗೆ ಸಾಂತ್ವನ ಹೇಳಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಶಿಕಾರಿಪುರ ತಾಲೂಕಿನ ಕೊಟ್ಟ ಗ್ರಾಮಕ್ಕೆ ಭೇಟಿ ನೀಡಿದ್ದು, ಗ್ರಾಮ ಮುಳುಗುವ ಹಂತ ತಲುಪಿದ್ದರ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ ಅಧಿಕಾರಿಗಳಿಗೆ ಮುಂಜಾಗ್ರತ ಕ್ರಮ ತೆಗೆದು ಕೊಳ್ಳುವಂತೆ ಸೂಚನೆ ನೀಡಿದ್ದಾರೆ.

Intro:ಶಿವಮೊಗ್ಗ,
ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆಯೂ ಕೂಡ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗ ರಜೆ ಘೋಷಣೆಯನ್ನು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.  ಕಳೆದ ೪ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಕಳೆದ ನಾಲ್ಕು ದಿನಗಳಿಂದ ಎಲ್ಲಾ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿತ್ತು. ಜಿಲ್ಲಾಧಿಕಾರಿ ಶಿವಕುಮಾರ್ ನಾಳೆಯೂ ಮುಂದುವರೆಸಿ ರಜೆಯನ್ನು ಆದೇಶಿಸಿದ್ದಾರೆ .
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.