ಶಿವಮೊಗ್ಗ: ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಸಾಗರ ತಾಲೂಕು ಲಿಂಗದಹಳ್ಳಿಯಲ್ಲಿ ಮರಸಾ ಗ್ರಾಮದ ಗಾಮಪ್ಪ ಎಂಬುವರ ಎಮ್ಮೆಗಳಿಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಸಾವನ್ನಪ್ಪಿವೆ.
ಅಲ್ಲದೇ ತಾಲೂಕಿನ ಹಲವು ಬಡಾವಣೆಗಳಲ್ಲಿ ಮನೆಗಳ ಮೇಲ್ಚಾವಣಿಗಳು ಹಾರಿ ಹೋಗಿದ್ದು, ಗಾಳಿಯ ರಭಸಕ್ಕೆ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಹಾನಿಗೀಡಾದ ಪ್ರದೇಶಗಳಿಗೆ ಸಾಗರ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಭದ್ರಾವತಿ ತಾಲೂಕಿನ ಗ್ರಾಮಾಂತರ ಭಾಗದಲ್ಲಿ ಮಳೆಯಿಂದ ಸಾಕಷ್ಟು ಅನಾಹುತ ಸೃಷ್ಟಿಯಾಗಿದ್ದು, ಮುಂದಿನ ನಾಲ್ಕೈದು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.