ETV Bharat / state

ಉಡುಪಿ ಆಯ್ತು ಈಗ ಭದ್ರಾವತಿಯ ಕಾಲೇಜಿನಲ್ಲೂ ಹಿಜಾಬ್-ಕೇಸರಿ ಶಾಲು ವಾರ್..! - ಭದ್ರಾವತಿಯ ಕಾಲೇಜಿನಲ್ಲಿ ಹಿಜಾಬ್- ಕೇಸರಿ ಶಾಲು ವಿವಾದ

ಉಡುಪಿಯ ಸರ್ಕಾರಿ ಕಾಲೇಜ್​ವೊಂದರಲ್ಲಿ ಹಿಜಾಬ್​ ವಿವಾದ ನಡೆಯುತ್ತಿರುವ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಸರ್ ಎಂ.ವಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಿಜಾಬ್ ವಿರುದ್ಧ ಕೇಸರಿ ಶಾಲು ಹೋರಾಟ ಆರಂಭಿಸಿದ್ದಾರೆ.

Hijab and Saffron Shawl controversy in Bhadravathi College
ಭದ್ರಾವತಿಯ ಕಾಲೇಜಿನಲ್ಲಿ ಹಿಜಾಬ್- ಕೇಸರಿ ಶಾಲುವಾರ್
author img

By

Published : Feb 1, 2022, 10:17 PM IST

Updated : Feb 2, 2022, 3:08 PM IST

ಶಿವಮೊಗ್ಗ: ಕರಾವಳಿ ಭಾಗದ ಕಾಲೇಜುಗಳಲ್ಲಿ ನಡೆಯುತ್ತಿದ್ದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಈಗ ಭದ್ರಾವತಿಗೂ ಕಾಲಿಟ್ಟಿದೆ. ಇಲ್ಲಿನ ನ್ಯೂ ಟೌನ್​​​​​ನಲ್ಲಿನ ಸರ್ ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕಳೆದ ಕೆಲವು ದಿನಗಳಿಂದ ಹಿಜಾಬ್ ವಿರುದ್ಧ ಕೇಸರಿ ಶಾಲು ಹೋರಾಟ ಆರಂಭವಾಗಿದೆ.

ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬರುತ್ತಿರುವ ವಿದ್ಯಾರ್ಥಿನಿಯರನ್ನು ಹೊರ ಹಾಕುವಂತೆ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದಿರುವ ಕೆಲ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಅಹಿತಕರ ವಾತಾವರಣ ನಿರ್ಮಾಣವಾಗಿದೆ.

ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬರುವುದಾದರೆ ತಾವು ಸಹ ಕೇಸರಿ ವಸ್ತ್ರದೊಂದಿಗೆ ಕಾಲೇಜಿಗೆ ಬರುವುದಾಗಿ ಹಠಕ್ಕೆ ಬಿದ್ದಿರುವ ವಿದ್ಯಾರ್ಥಿಗಳು, ಮಂಗಳವಾರ ಕೇಸರಿ ವಸ್ತ್ರದೊಂದಿಗೆ ಕಾಲೇಜಿಗೆ ಆಗಮಿಸಿದ್ದಾರೆ. ಇದರಿಂದಾಗಿ ಕಾಲೇಜಿನಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ಹಿಜಾಬ್ ಹೋರಾಟ ರೂಪುಗೊಳ್ಳಲು ಕಾರಣ: ಕಳೆದ ಕೆಲವು ದಿನಗಳ ಹಿಂದೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಒಂದು ಧರ್ಮದ ವಿದ್ಯಾರ್ಥಿನಿಯೋರ್ವಳೊಂದಿಗೆ ಇನ್ನೊಂದು ಧರ್ಮದ ವಿದ್ಯಾರ್ಥಿ ಮಾತನಾಡುತ್ತಿದ್ದಾನೆ ಎಂಬ ಕಾರಣಕ್ಕೆ ಆ ವಿದ್ಯಾರ್ಥಿ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಉಂಟಾದ ವಿವಾದ ಇದೀಗ ಹಿಜಾಬ್ ವಿರುದ್ಧದ ಹೋರಾಟಕ್ಕೆ ಕಾರಣ ಎಂದು ಹೇಳಲಾಗ್ತಿದೆ.

ಪ್ರಾಂಶುಪಾಲರ ಸ್ಪಷ್ಟನೆ: ಈ ಕುರಿತಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಉಮಾಶಂಕರ್ ಮಾಹಿತಿ ನೀಡಿದ್ದು, ಕೆಲವರು ಕಾಲೇಜಿನ ಬಗ್ಗೆ ತಪ್ಪು ಸಂದೇಶ ನೀಡಲು ಯತ್ನಿಸುತ್ತಿದ್ದಾರೆ. ಕಾಲೇಜಿನಲ್ಲಿ 2010ರಿಂದ ವಸ್ತ್ರ ಸಂಹಿತೆ ಜಾರಿಯಲ್ಲಿದ್ದು, ತರಗತಿಗಳಿಗೆ ಕಡ್ಡಾಯವಾಗಿ ಸಮವಸ್ತ್ರದಲ್ಲಿಯೇ ಆಗಮಿಸಬೇಕು. ಬುಧವಾರ ಮತ್ತು ಶನಿವಾರ ಸಮವಸ್ತ್ರ ಕಡ್ಡಾಯಗೊಳಿಸಿಲ್ಲ. ಈ ನಡುವೆ ಇದೀಗ ಹಿಜಾಬ್ ಧರಿಸುವ ಸಂಬಂಧ ವಿನಾಕಾರಣ ಕಾಲೇಜಿನಲ್ಲಿ ಗೊಂದಲ ವಾತಾವರಣ ನಿರ್ಮಾಣವಾಗಿದೆ. ಇದಕ್ಕೂ ಸಹ ಇದೀಗ ಪರಿಹಾರ ಕಂಡುಕೊಳ್ಳಲಾಗಿದೆ. ಹಿಜಾಬ್ ಸಮವಸ್ತ್ರವಲ್ಲ ಎಂಬುದು ನಮಗೂ ತಿಳಿದಿದೆ. ಕಾಲೇಜಿಗೆ ಬರುತ್ತಿರುವ ವಿದ್ಯಾರ್ಥಿನಿಯರು ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಿಕೊಂಡು ಬರುತ್ತಿದ್ದಾರೆ. ಈ ವಿದ್ಯಾರ್ಥಿನಿಯರಿಗೆ ಹಿಜಾಬ್ ಬದಲಿಸಿ ಸಮವಸ್ತ್ರದಲ್ಲಿ ತರಗತಿಗೆ ಹೋಗಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಇಳಿಕೆ ಕಂಡ ಕೊರೊನಾ ಕೇಸ್​: 14,366 ಮಂದಿಗೆ ಕೋವಿಡ್​ ದೃಢ, 58 ಸಾವು

ಇವೆಲ್ಲದರ ನಡುವೆ ರಾಷ್ಟ್ರೀಯ ಭಜರಂಗದಳ ಜಿಲ್ಲಾಧ್ಯಕ್ಷ ಚಂದನ್‌ರಾವ್, ಗ್ರಾಮಾಂತರ ಅಧ್ಯಕ್ಷ ನವೀನ್, ರಾಮ್ ಸೇನೆ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಉಮೇಶ್ ಮತ್ತು ಓಂ ಹಿಂದೂ ಕೋಟೆ ಸಂಘಟನೆ ತಾಲೂಕು ಅಧ್ಯಕ್ಷ ಮಂಜುನಾಥ್, ಕೇಸರಿಪಡೆ ಅಧ್ಯಕ್ಷ ಗಿರೀಶ್ ಸೇರಿದಂತೆ ಇನ್ನಿತರರು ಕಾಲೇಜು ಆಡಳಿತ ಮಂಡಳಿಯೊಂದಿಗೆ ಈ ಸಂಬಂಧ ಚರ್ಚಿಸಿದ್ದಾರೆ. ಈ ಸಂಘಟನೆಗಳು ಇದೀಗ ಹಿಂದೂ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿವೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Feb 2, 2022, 3:08 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.