ಶಿವಮೊಗ್ಗ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಮಲೆನಾಡಿಗೂ ಕಾಲಿಟ್ಟಿದ್ದು, ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಶಿವಮೊಗ್ಗದ ವಿದ್ಯಾನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನಲ್ಲಿ ಹಿಜಾಬ್ಗೆ ಅವಕಾಶ ನೀಡದಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದು, ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಹೊರಗಿಡುವಂತೆ ಆಗ್ರಹಿಸುತ್ತಿದ್ದಾರೆ.
ವಿದ್ಯಾರ್ಥಿಗಳನ್ನು ಮನವೊಲಿಸಲು ಪ್ರಾಂಶುಪಾಲರು ಯತ್ನಿಸಿದರಾದರೂ, ಅವರ ಮಾತನ್ನು ಕೇಳದೆ ಒಂದೇ ಮಾತರಂ, ಜೈ ಶ್ರೀರಾಮ್ ಘೋಷಣೆಯನ್ನು ಕೂಗುತ್ತಿದ್ದರು. ಬಳಿಕ ಸ್ಥಳಕ್ಕೆ ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಆಗಮಿಸಿದ್ರು.
ಇದನ್ನೂ ಓದಿ: ಕುಂದಾಪುರದ ಪಿಯು ಕಾಲೇಜಿಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು: ಪ್ರತ್ಯೇಕ ಕೊಠಡಿ ವ್ಯವಸ್ಥೆ
ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಿ ಬಂದವರು ತರಗತಿಗೆ ಬರಲು ಕಾಲೇಜು ಆಡಳಿತ ಮಂಡಳಿ ಅವಕಾಶ ನೀಡಿಲ್ಲ. ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳು ಸಹ್ಯಾದ್ರಿ ವಾಣಿಜ್ಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.