ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನಿನ್ನೆ ತೀರ್ಥಹಳ್ಳಿಗೆ ವಾಪಸ್ ಆಗುತ್ತಿದ್ದ ವೇಳೆ ಬಿ.ಆರ್.ಪಿ ಬಳಿಯ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಮೂವರು ದ್ವಿಚಕ್ರವಾಹನ ಸವಾರರನ್ನು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದ ಗೃಹ ಸಚಿವರು, ನಿನ್ನೆ ಸಂಜೆ ತೀರ್ಥಹಳ್ಳಿಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಬಿ.ಆರ್.ಪಿ ಬಳಿಯ ರಸ್ತೆಯಲ್ಲಿ ದ್ವಿಚಕ್ರ ವಾಹನವೊಂದು ಹಸುವಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಗಂಡ- ಹೆಂಡತಿ ಹಾಗೂ ಮಗು ಗಾಯಗೊಂಡಿದ್ದರು.
ಇದನ್ನು ಗಮನಿಸಿದ ಆರಗ ಜ್ಞಾನೇಂದ್ರ, ತಮ್ಮ ಕಾರನ್ನು ನಿಲ್ಲಿಸಿ, ಸ್ವತಃ ತಾವೇ ಗಾಯಾಳುಗಳನ್ನು ಉಪಚರಿಸಿ, ಅವರ ವಾಹನದಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ, ಮಾನವೀಯತೆ ಮೆರೆದಿದ್ದಾರೆ.
ಸಚಿವರು ಗಾಯಾಳುಗಳನ್ನು ತಾವೇ ಖುದ್ದು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿವೆ.
ಓದಿ: ವಿಷಾಹಾರ ಸೇವಿಸಿ ಇಂದಿರಾಗಾಂಧಿ ವಸತಿ ಶಾಲೆಯ 50 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು