ಶಿವಮೊಗ್ಗ : ನಗರದ ಪ್ರಿಯಾಂಕಾ ಲೇಔಟ್ನಲ್ಲಿನ ಮೂರನೇ ಕ್ರಾಸ್ನ ಮನೆಯೊಂದರಲ್ಲಿ ರಕ್ತದ ಮಡುವಿನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಚಾಕುವಿನಿಂದ ಕತ್ತು ಕೊಯ್ದ ಸ್ಥಿತಿಯಲ್ಲಿ ಗೃಹಿಣಿಯು ಸಾವನ್ನಪ್ಪಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಸ್ಥಳಕ್ಕೆ ತುಂಗಾನಗರ ಪೊಲೀಸರು ಬಂದಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತರನ್ನು 30 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಮನೆಯಲ್ಲಿ ಗಂಡ ಹೆಂಡತಿಯ ನಡುವೆ ಜಗಳವಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದು, ಇದೇ ವಿಚಾರವಾಗಿ ಘಟನೆ ಕೊಲೆ ಸಂಭವಿಸಿತಾ ಎಂಬ ಅನುಮಾನ ಮೂಡಿದೆ. ಘಟನೆಯಲ್ಲಿ ಮಹಿಳೆಯ ಮೃತದೇಹ ಅಡುಗೆ ಕೋಣೆಯಲ್ಲಿ ಪತ್ತೆಯಾಗಿದ್ದು, ಚಾಕುವಿನಿಂದ ಕತ್ತು ಕೊಯ್ದುಕೊಂಡರೇ ಅಥವಾ ಕೊಲೆಯೇ ಎಂಬುದು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.
ಇದನ್ನೂ ಓದಿ : ಹಳ್ಳದಲ್ಲಿ ಕೊಚ್ಚಿ ಹೋದ ಇಬ್ಬರು ಪೊಲೀಸರು, ಒಬ್ಬರ ಮೃತದೇಹ ಪತ್ತೆ..