ETV Bharat / state

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಗೃಹಜ್ಯೋತಿ ಬಳಕೆದಾರರೆಷ್ಟು? - ಗೃಹಜ್ಯೋತಿ ನೋಂದಣಿ

ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಶಿವಮೊಗ್ಗ ವೃತ್ತ ವ್ಯಾಪ್ತಿಯಲ್ಲಿ ಉತ್ತಮ ಸ್ಪಂದನೆ ದೊರೆಕಿದ್ದು, ಶೇಕಡಾ 80 ರಷ್ಟು ಗ್ರಾಹಕರು ಈ ಯೋಜನೆಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ.

Gruha Jyothi
ಗೃಹಜ್ಯೋತಿ
author img

By ETV Bharat Karnataka Team

Published : Aug 30, 2023, 7:18 AM IST

ಶಿವಮೊಗ್ಗ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಈಗಾಗಲೇ ಜಾರಿಯಾಗಿದ್ದು, ಇದರ ಸದುಪಯೋಗವನ್ನು ಕೋಟ್ಯಂತರ ಫಲಾನುಭವಿಗಳು ಪಡೆಯುತ್ತಿದ್ದಾರೆ. ಅದರಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಲಕ್ಷಾಂತರ ಮಂದಿ ಈ ಯೋಜನೆಯ ಉಪಯೋಗ ಪಡೆದುಕೊಂಡಿದ್ದಾರೆ.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಯು ಬೆಲೆ ಏರಿಕೆಯಿಂದ ಬಳಲುತ್ತಿರುವ ಜನ ಸಾಮಾನ್ಯರಿಗೆ ವರದಾನವಾಗಿದೆ. ಗೃಹಜ್ಯೋತಿ ಅನುಷ್ಠಾನದಲ್ಲಿ ಅತ್ಯಂತ ಸರಳ ಹಾಗೂ ಪಾರದರ್ಶಕ ವ್ಯವಸ್ಥೆಯನ್ನು ಸರ್ಕಾರ ಜಾರಿಗೊಳಿಸಿದೆ. ರಾಜ್ಯದ ಎಲ್ಲ ಗೃಹ ಬಳಕೆ ವಿದ್ಯುತ್ ಗ್ರಾಹಕರು ಈ ಯೋಜನೆಗೆ ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಕೆ ಚಾಲನೆಗೊಂಡ ದಿನದಿಂದ ಈವರೆಗೆ ಉತ್ತಮ ಸ್ಪಂದನೆ ದೊರತಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಗೃಹಜ್ಯೋತಿ ಬಳಕೆದಾರರೆಷ್ಟು?: ಗೃಹಜ್ಯೋತಿ ಯೋಜನೆಗೆ ಶಿವಮೊಗ್ಗ ವೃತ್ತದ ವ್ಯಾಪ್ತಿಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ. ಶೇ. 80 ರಷ್ಟು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ದಿನಾಂಕ 20-08-2023 ರವರೆಗೆ ಶಿವಮೊಗ್ಗ ವೃತ್ತ ವ್ಯಾಪ್ತಿಯಲ್ಲಿ ಒಟ್ಟು 2,63,400 ಗ್ರಾಹಕರಿಗೆ ಗೃಹಜ್ಯೋತಿ ಬಿಲ್​ಗಳನ್ನು ವಿತರಿಸಲಾಗಿದೆ. ಒಟ್ಟು 2,05,992 ಗ್ರಾಹಕರಿಗೆ ಶೂನ್ಯ ಬಿಲ್​ಗಳನ್ನು ವಿತರಿಸಲಾಗಿದೆ. ಶೂನ್ಯ ಬಿಲ್ ಸಬ್ಸಿಡಿ ಮೊತ್ತ 5,39,54,539 ರೂ. ಆಗಿರುತ್ತದೆ. 57,408 ಗ್ರಾಹಕರಿಗೆ ನೆಟ್ ಬಿಲ್‍ಗಳನ್ನು ನೀಡಲಾಗಿದ್ದು, ನೆಟ್ ಬಿಲ್ ಸಬ್ಸಿಡಿ ಮೊತ್ತ ರೂ. 2,59,21,565 ಆಗಿರುತ್ತದೆ ಎಂದು ಮೆಸ್ಕಾಂನ ಶಿವಮೊಗ್ಗ ವೃತ್ತದ ನಿಯಂತ್ರಣಾಧಿಕಾರಿ ನಾಮದೇವ.ಎನ್.ವಿ ಅವರು ಮಾಹಿತಿ ನೀಡಿದ್ದಾರೆ.

ಗೃಹ ವಿದ್ಯುತ್ ಬಳಕೆದಾರರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದ್ದು, ವಾಣಿಜ್ಯ ಬಳಕೆದಾರರು ಈ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ. ಬಾಡಿಗೆದಾರು, ವಸತಿ ಸಮುಚ್ಚಯ (ಅಪಾರ್ಟ್‍ಮೆಂಟ್) ಮಾಲಿಕರು ಪ್ರತ್ಯೇಕ ವಿದ್ಯುತ್ ಮೀಟರ್ ಅಳವಡಿಸಿದ್ದರೆ ಈ ಯೋಜನೆಯ ಪ್ರಯೋಜನ ಪಡೆಯಲು ಅವಕಾಶವಿದೆ. ಫಲಾನುಭವಿಗೆ ನಿಗದಿಪಡಿಸಿರುವ ವಿದ್ಯುತ್‍ಗಿಂತ ಹೆಚ್ಚುವರಿ ಯೂನಿಟ್ ವಿದ್ಯುತ್ ಬಳಸಿದರೆ, ಬಿಲ್​ ಅನ್ನು ಪಾವತಿಸಬೇಕಾಗುತ್ತದೆ. ಮಾಸಿಕ ಬಳಕೆಯು 200 ಯೂನಿಟ್‍ಗಿಂತ ಹೆಚ್ಚಿದ್ದರೆ ಆ ನಿರ್ದಿಷ್ಟ ತಿಂಗಳಿಗೆ ಸಂಪೂರ್ಣ ಬಿಲ್​ಅನ್ನು ಪಾವತಿಸಬೇಕು.

ಇದನ್ನೂ ಓದಿ : Gruha Jyothi : ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆ ಲಭ್ಯ: ಪಾವತಿಗೆ ಸೆ.30 ಗಡುವು

ಗೃಹಜ್ಯೋತಿ ನೋಂದಣಿ ಹೇಗೆ? : ಈ ಯೋಜನೆಯ ಅನುಷ್ಠಾನಕ್ಕೆ ಅತ್ಯಂತ ಸರಳ ಹಾಗೂ ಪಾರದರ್ಶಕ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಪ್ರತಿ ಗೃಹ ಬಳಕೆದಾರರು ಸೇವಾ ಸಿಂಧು ಪೋರ್ಟಲ್‍ನಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು. ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ, ಗ್ರಾ.ಪಂ, ನಾಡ ಕಚೇರಿ ಅಥವಾ ಎಲ್ಲಾ ವಿದ್ಯುತ್ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ : Guarantee scheme : ಗೃಹಜ್ಯೋತಿ ಯೋಜನೆಗೆ 1,61,958 ಗ್ರಾಹಕರಿಂದ ನೋಂದಣಿ

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು : ನೋಂದಣಿ ಸಂದರ್ಭದಲ್ಲಿ ಆಧಾರ್ ಸಂಖ್ಯೆ, ವಿದ್ಯುತ್ ಬಿಲ್​ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ ಖಾತೆ ಸಂಖ್ಯೆ/ ಬಾಡಿಗೆ/ಭೋಗ್ಯದ ಕರಾರು ಪತ್ರ (ಬಾಡಿಗೆ/ಭೋಗ್ಯದಾರರಾಗಿದ್ದಲ್ಲಿ) ಅಥವಾ ವಿಳಾಸವನ್ನು ಸೂಚಿಸುವ ವೋಟರ್ ಐಡಿ ಸಲ್ಲಿಸಬೇಕು.

ಇದನ್ನೂ ಓದಿ : Congress Guarantee : ಗೃಹಜ್ಯೋತಿ ಅರ್ಜಿ ಹಾಕದೇ ಇದ್ದಲ್ಲಿ ಫ್ರೀ ಕರೆಂಟ್​ ಇಲ್ಲ: ಕೆ.ಜೆ ಜಾರ್ಜ್​ ಸ್ಪಷ್ಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.