ಶಿವಮೊಗ್ಗ: MISL ಅಧ್ಯಕ್ಷ ಹಾಗೂ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಆಗಸ್ಟ್ 4ರಂದು ಸಣ್ಣ ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾದಾಗ ಸೋಂಕು ಇರುವುದು ಪತ್ತೆಯಾಗಿತ್ತು. ಇದರಿಂದ ಅಂದೇ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿದ್ದರು.
ಹಾಲಪ್ಪ ಜೊತೆ ಅವರ ಪತ್ನಿ ಹಾಗೂ ಕಾರು ಚಾಲಕನಿಗೆ ಸಹ ಕೋವಿಡ್ ಸೋಂಕು ತಗುಲಿತ್ತು. ಸದ್ಯ ಶಾಸಕರು ಮಾತ್ರ ಬಿಡುಗಡೆಯಾದ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾಗುವಾಗ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಹರತಾಳು ಹಾಲಪ್ಪ ಧನ್ಯವಾದ ತಿಳಿಸಿದ್ದಾರೆ.