ETV Bharat / state

ಸಿದ್ದರಾಮೋತ್ಸವದ ಬಳಿಕ ಬಿಜೆಪಿ ಸರ್ಕಾರ ಪತನ : ಹೆಚ್.ಎಸ್. ಸುಂದರೇಶ್

author img

By

Published : Jul 12, 2022, 6:46 PM IST

Updated : Jul 12, 2022, 7:40 PM IST

ಸಿದ್ದರಾಮೋತ್ಸವ ಅಮೃತ ಮಹೋತ್ಸವದ ಸವಿನೆನಪಿನಲ್ಲಿ ನಡೆಯುವ ಕಾರ್ಯಕ್ರಮವಾಗಿದೆ. ಇದಕ್ಕಾಗಿ ರಾಜ್ಯಮಟ್ಟದಲ್ಲಿ ಅಮೃತ ಮಹೋತ್ಸವ ಸಮಿತಿ ರಚಿಸಲಾಗಿದೆ. ಈ ಸಮಿತಿ ರಾಜ್ಯಾಧ್ಯಕ್ಷರಾಗಿ ಕೆ.ಎನ್. ರಾಜಣ್ಣ, ಗೌರವಾಧ್ಯಕ್ಷರಾಗಿ ಆರ್.ವಿ. ದೇಶಪಾಂಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿವರಿಸಿದರು.

ಸಿದ್ದರಾಮೋತ್ಸವದ ಬಳಿಕ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದ ಹೆಚ್ಎಸ್ ಸುಂದರೇಶ್

ಶಿವಮೊಗ್ಗ: ಬೆಣ್ಣೆನಗರಿ ದಾವಣಗೆರೆಯಲ್ಲಿ ಆಗಸ್ಟ್ 3 ರಂದು ನಡೆಯಲಿರುವ ಸಿದ್ದರಾಮೋತ್ಸವದ ಬಳಿಕ ಬಿಜೆಪಿ ಸರ್ಕಾರ ಪತನದತ್ತ ಸಾಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮೋತ್ಸವದ ಜೊತೆಗೆ ಪಕ್ಷದ ಸಂಘಟನೆಗೂ ಒತ್ತು ನೀಡಲಾಗುತ್ತದೆ. ಕಾಂಗ್ರೆಸ್ ಪಕ್ಷದಿಂದಲೇ ಈ ಕಾರ್ಯಕ್ರಮ ಆಯೋಜಿಸಿದ್ದು, ಬೇರೆ ಯಾವ ಪಕ್ಷದವರಿಗೂ ಕರೆ ನೀಡಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯದ ನಾಯಕರಾದ ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಆರ್.ವಿ. ದೇಶಪಾಂಡೆ ಸೇರಿದಂತೆ ಎಲ್ಲ ಮುಖಂಡರು, ಕಾಂಗ್ರೆಸ್ ಶಾಸಕರು, ಮಾಜಿ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಸಿದ್ದರಾಮೋತ್ಸವ ಅಮೃತ ಮಹೋತ್ಸವದ ಸವಿನೆನಪಿನಲ್ಲಿ ನಡೆಯುವ ಕಾರ್ಯಕ್ರಮವಾಗಿದೆ. ಇದಕ್ಕಾಗಿ ರಾಜ್ಯಮಟ್ಟದಲ್ಲಿ ಅಮೃತ ಮಹೋತ್ಸವ ಸಮಿತಿ ರಚಿಸಲಾಗಿದೆ. ಈ ಸಮಿತಿ ರಾಜ್ಯಾಧ್ಯಕ್ಷರಾಗಿ ಕೆ.ಎನ್. ರಾಜಣ್ಣ, ಗೌರವಾಧ್ಯಕ್ಷರಾಗಿ ಆರ್.ವಿ. ದೇಶಪಾಂಡೆ ಅವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ತಮ್ಮನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ.

ಕಾರ್ಯಕ್ರಮದ ಯಶಸ್ಸಿಗೆ ಈಗಾಗಲೇ ಹಲವು ಸಭೆಗಳನ್ನು ನಡೆಸಲಾಗಿದೆ. ಜಿಲ್ಲೆಯಿಂದ ಸುಮಾರು 30 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಸಿದ್ದರಾಮೋತ್ಸವದ ಬಳಿಕ ಬಿಜೆಪಿ ಸರ್ಕಾರ ಪತನ : ಹೆಚ್.ಎಸ್. ಸುಂದರೇಶ್

ಈ ಕಾರ್ಯಕ್ರಮದಿಂದ ಬಿಜೆಪಿಯವರು ತಲ್ಲಣಗೊಂಡಿದ್ದಾರೆ. ಕೆ.ಎಸ್. ಈಶ್ವರಪ್ಪ ಸೇರಿದಂತೆ ಬಿಜೆಪಿಯ ಕೆಲ ನಾಯಕರು ಕಾರ್ಯಕ್ರಮದ ನಂತರ ಕಾಂಗ್ರೆಸ್ ಪಕ್ಷ ಇಬ್ಭಾಗವಾಗುತ್ತದೆ ಎಂದು ಬೊಗಳೆ ಬಿಡುತ್ತಿದ್ದಾರೆ. ಇದು ಇಬ್ಭಾಗವಾಗುವ ಕಾರ್ಯಕ್ರಮವಲ್ಲ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ವಿಜೃಂಭಿಸುವ ಕಾರ್ಯಕ್ರಮವಾಗುತ್ತದೆ. ಅದೇ ಕಾಲಕ್ಕೆ ಬಿಜೆಪಿಯ ಪತನಕ್ಕೆ ನಾಂದಿಯೂ ಆಗುತ್ತದೆ ಎಂದರು.

ಇದನ್ನೂ ಓದಿ: ಪಲ್ಟಿಯಾದ ವಾಹನ: ನಾಲ್ಕು ಕ್ವಿಂಟಾಲ್​ ಮೀನು ಲೂಟಿ ಮಾಡಿದ ಸ್ಥಳೀಯರು

Last Updated : Jul 12, 2022, 7:40 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.