ETV Bharat / state

ಕೊರೊನಾ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಸಚಿವರೊಬ್ಬರ ಕೈವಾಡ-ಹೆಚ್‌ ಎಸ್‌ ಸುಂದರೇಶ್‌ - Shimogga

ಈ ಎಲ್ಲಾ ಉಪಕರಣಗಳ ಖರೀದಿಯಲ್ಲಿ ನಡೆದ ಭ್ರಷ್ಟಾಚಾರವನ್ನು ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದರೂ ಕೂಡ ಈವರೆಗೂ ಯಾವುದೇ ತನಿಖೆ ನಡೆಸಿಲ್ಲ. ಆದ್ದರಿಂದ ತಕ್ಷಣವೇ ಲೆಕ್ಕಪತ್ರ ನೀಡುವುದರ ಮೂಲಕ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು..

Congress press meet
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್
author img

By

Published : Jul 19, 2020, 6:58 PM IST

ಶಿವಮೊಗ್ಗ : ಕೊರೊನಾ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದ ಭಾರೀ ಭ್ರಷ್ಟಾಚಾರದ ಹಿಂದೆ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಆರೋಪಿಸಿದರು.

ಆನ್​ಲೈನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಉಪಕರಣಗಳ ಖರೀದಿಯಲ್ಲಿ ಭಾರೀ ಅವ್ಯವಹಾರವಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಪಿಪಿಇ ಕಿಟ್, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಉಪಕರಣ ಸೇರಿ ವೆಂಟಿಲೇಟರ್ ಖರೀದಿಯಲ್ಲೂ ಕೂಡ ಭಾರೀ ಭ್ರಷ್ಟಾಚಾರ ನಡೆದಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್ ಎಸ್ ಸುಂದರೇಶ್

ಬೆಂಗಳೂರಿನಲ್ಲಿರುವ ಪದ್ಮಾಂಬ ಡಯಾಗ್ನಾಸ್ಟಿಕ್ ಸೆಂಟರ್, ಮಂಜುನಾಥ ಲ್ಯಾಬ್ ಸೇರಿ ಕೆಲವು ಲ್ಯಾಬ್‌ಗಳು ಸಚಿವರ ಸಂಬಂಧಿಕರ ಹೆಸರಿನಲ್ಲಿವೆ. ಅಲ್ಲದೇ ವೆಂಟಿಲೇಟರ್ ಖರೀದಿಯಲ್ಲಿ ಶೇ.60ರಷ್ಟು ಹಣ ಲೂಟಿಯಾಗಿದೆ. ಮಾರುಕಟ್ಟೆ ದರಕ್ಕಿಂತ ಮೂರುಪಟ್ಟು ಹಣ ಪಾವತಿಸಿ ಖರೀದಿಸಲಾಗಿದೆ. ಇದರಲ್ಲಿ ಪ್ರಭಾವಿ ಸಚಿವರ ಪ್ರಭಾವವಿದ್ದು, ಕಮೀಷನ್‌ಗಾಗಿ ನಿಯಮಗಳನ್ನೇ ಉಲ್ಲಂಘಿಸಲಾಗಿದೆ ಎಂದು ದೂರಿದರು.

ಈ ಎಲ್ಲಾ ಉಪಕರಣಗಳ ಖರೀದಿಯಲ್ಲಿ ನಡೆದ ಭ್ರಷ್ಟಾಚಾರವನ್ನು ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದರೂ ಕೂಡ ಈವರೆಗೂ ಯಾವುದೇ ತನಿಖೆ ನಡೆಸಿಲ್ಲ. ಆದ್ದರಿಂದ ತಕ್ಷಣವೇ ಲೆಕ್ಕಪತ್ರ ನೀಡುವುದರ ಮೂಲಕ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು. ಕೊರೊನಾ ನಿಯಂತ್ರಣಕ್ಕೆ ಕಾಂಗ್ರೆಸ್ ಪಕ್ಷ ಯಾವಾಗಲೂ ಸಹಕಾರ ನೀಡುತ್ತಿದೆ. ಸರ್ಕಾರದ ಜೊತೆ ನಾವಿದ್ದೇವೆ.

ಆದರೆ, ಇಂತಹ ಅವ್ಯವಹಾರಗಳನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ ಮತ್ತು ಕಟ್ಟುನಿಟ್ಟಾಗಿ ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಆದೇಶ ಮಾಡಬೇಕು. ಈ ಹಿಂದೆ ನಾವು ಪ್ರತಿ ತಾಲೂಕಿಗೆ 50 ಹಾಸಿಗೆಯಂತೆ ಕೊರೊನಾ ಸೋಂಕಿತರಿಗೆ ಮೀಸಲಿಡಬೇಕು ಹಾಗೂ ಇತರೆ ಸಲಹೆಗಳನ್ನು ನೀಡಿದ್ದೆವು. ಆದರೆ, ಅಧಿಕಾರಿಗಳು ಯಾವುದನ್ನೂ ಪಾಲಿಸುತ್ತಿಲ್ಲ ಎಂದು ದೂರಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.