ETV Bharat / state

ಹುಣಸೋಡು ಸಂತ್ರಸ್ತರ ಪ್ರತಿಭಟನೆ: ಪರಿಹಾರ ನೀಡಲು ಬರಲ್ಲ ಎಂದ ಈಶ್ವರಪ್ಪ - kannada top news

ಜಿಲಿಟಿನ್ ಕಡ್ಡಿಗಳು ಸ್ಪೋಟಗೊಂಡು ಅಪಾರ ಪ್ರಮಾಣದ ಹಾನಿ - ಗ್ರಾಮದಲ್ಲಿ ಸಣ್ಣಪುಟ್ಟ ಹಾನಿಯಾಗಿದೆ ಎಂಬ ವರದಿ - ಬಿರುಕು ಬಿಟ್ಟ ಮನೆಗಳಲ್ಲಿ ಜೀವ ಭಯದಿಂದ ವಾಸ.

hunasodu-victims-protest-eshwarappa-said-that-he-will-not-come-to-give-compensation
ಹುಣಸೋಡು ಸಂತ್ರಸ್ತರ ಪ್ರತಿಭಟನೆ: ಪರಿಹಾರ ನೀಡಲು ಬರಲ್ಲ ಎಂದ ಈಶ್ವರಪ್ಪ
author img

By

Published : Jan 19, 2023, 8:34 PM IST

ಶಿವಮೊಗ್ಗ: ಕಳೆದ ಎರಡು ವರ್ಷಗಳ ಹಿಂದೆ‌ ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಹೊರ ಭಾಗದಲ್ಲಿ‌ ನಡೆದ ಸ್ಪೋಟ ಪ್ರಕರಣದಲ್ಲಿ ಹಾನಿಗೊಳಗಾದ ಮನೆಗಳಿಗೆ ಸೂಕ್ತ ಪರಿಹಾರ ನೀಡದ ಜಿಲ್ಲಾಡಳಿತ ವಿರುದ್ದ ಸಂತ್ರಸ್ತರ ಜೊತೆ ಕರ್ನಾಟಕ ನವ ನಿರ್ಮಾಣ ವೇದಿಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದೆ‌.

2020ರ ಜನವರಿ 21 ರಂದು ಕಲ್ಲು ಗಣಿಗಾರಿಕೆ ನೆಡೆಸಲು ತಂದಿದ್ದ ಜೀಲಿಟಿನ್ ಕಡ್ಡಿಗಳು ಸ್ಪೋಟಗೊಂಡು ಜೀವ ಹಾನಿಯಾಗಿತ್ತು. ಅಲ್ಲದೇ ನೂರಕ್ಕೂ ಅಧಿಕ ಮನೆಗಳಿಗೆ ಹಾನಿಯನ್ನುಂಟು ಮಾಡಿತ್ತು. ಆದರೆ, ಜಿಲ್ಲಾಡಳಿತ ಇದುವರೆಗೂ ಯಾವುದೇ ಪರಿಹಾರ ನೀಡಿಲ್ಲ ಎಂದು ಸಂತ್ರಸ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ‌. ಸ್ಪೋಟಗೊಂಡು ಹಾನಿಗೊಳಗಾದ ಮನೆಗಳ ಸರ್ವೆಗೆ ಜಿಲ್ಲಾ ಪಂಚಾಯತ್​ನ ಇಂಜಿನಿಯರಿಂಗ್ ವಿಭಾಗದಿಂದ ಪರಿಶೀಲಿನೆ ನಡೆಸಿದರು.

ಆದರೆ, ಅವರು ಹುಣಸೋಡು ಗ್ರಾಮದಲ್ಲಿ ಸಣ್ಣಪುಟ್ಟ ಹಾನಿಯಾಗಿದೆ ಎಂಬ ವರದಿಯನ್ನು ನೀಡಿದ್ದರು. ಇದರಿಂದ ಯಾರಿಗೂ ಸರಿಯಾದ ಪರಿಹಾರ ಒದಗಿಸಿರಲಿಲ್ಲ. ಇದರಿಂದ ಸ್ಫೋಟದಿಂದ ಬಿರುಕು ಬಿಟ್ಟ ಮನೆಗಳಲ್ಲಿ ಜೀವ ಭಯದಿಂದ ವಾಸ ಮಾಡುವಂತಾಗಿದೆ. ಬಿರುಕು ಬಿಟ್ಟ ಮನೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಪರಿಹಾರ ನೀಡಲು ಬರಲ್ಲ ಎಂದ ಮಾಜಿ ಸಚಿವ ಈಶ್ವರಪ್ಪ: ಹುಣಸೋಡು ಸ್ಫೋಟ ಪ್ರಕರಣದ ಪರಿಹಾರಕ್ಕಾಗಿ ಸಂತ್ರಸ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುವಾಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ವಾಪಸ್ ಆದ ಮಾಜಿ ಸಚಿವ ಈಶ್ವರಪ್ಪ ಅವರು ಪ್ರತಿಭಟನೆ ನಡೆಸುವವರು ಪರಿಹಾರ ಕಲ್ಪಿಸಿಕೊಡುವಂತೆ ಮನವಿ ಮಾಡಿದರು. ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ಇದಕ್ಕೆ ಪರಿಹಾರ ನೀಡಲು ಬರಲ್ಲ ಎಂದು ಹೇಳಿ ಕಾರು ಏರಿ ಹೊರಟು ಹೋದರು.

ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 8 ರಂದು ಶಿವಮೊಗ್ಗ ನಗರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರಮುಖ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುವುದು. ಎಲ್ಲ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ವಿವರಗಳನ್ನು ಜಿಲ್ಲಾಧಿಕಾರಿ ಅವರಿಗೆ ತಕ್ಷಣ ಸಲ್ಲಿಸುವಂತೆ ಮಾಜಿ ಸಚಿವ ಈಶ್ವರಪ್ಪ ಸೂಚನೆ ನೀಡಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ 23 ಶಾಲೆಗಳಲ್ಲಿ ಸ್ಮಾರ್ಟ್ ತರಗತಿಗಳನ್ನು ಅನುಷ್ಟಾನಗೊಳಿಸಲಾಗಿದೆ. ವಿವೇಕ ಶಾಲೆ ಯೋಜನೆಯಡಿ 14 ಕಾಮಗಾರಿಗಳ ಶಂಕುಸ್ಥಾಪನೆ, ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ 10 ಅಂಗನವಾಡಿಗಳ ಉದ್ಘಾಟನೆ ಹಾಗೂ ಇನ್ನೂ 11 ಅಂಗನವಾಡಿಗಳಿಗೆ ಶಂಕುಸ್ಥಾಪನೆ. ಈಗಾಗಲೇ ಪೂರ್ಣಗೊಂಡಿರುವ 300 ಆಶ್ರಯ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ, ನಿರ್ಮಿತಿ ಕೇಂದ್ರದ ವತಿಯಿಂದ ಕೈಗೊಳ್ಳಲಾಗಿರುವ 24 ಸಮುದಾಯ ಭವನಗಳ ಉದ್ಘಾಟನೆ ಹಾಗೂ ಪ್ರಾದೇಶಿಕ ಲಸಿಕಾ ಕೇಂದ್ರಕ್ಕೆ ಶಂಕುಸ್ಥಾಪನೆ ಸೇರಿದಂತೆ ಎಲ್ಲಾ ಪ್ರಮುಖ ಕಾಮಗಾರಿಗಳ ವಿವರಗಳನ್ನು ಒದಗಿಸಬೇಕು ಎಂದು ಹೇಳಿದರು.

ಈಗಾಗಲೇ 300 ಆಶ್ರಯ ಮನೆಗಳು ಪೂರ್ಣಗೊಂಡಿದ್ದು, ಅದಕ್ಕೆ ನೀರು, ವಿದ್ಯುತ್ ಮತ್ತು ಒಳಚರಂಡಿ ಸಂಪರ್ಕಗಳನ್ನು ತಕ್ಷಣ ಕಲ್ಪಿಸಿ ಫಲಾನುಭವಿಗಳಿಗೆ ಹಕ್ಕು ಪತ್ರ ಒದಗಿಸಲು ಕ್ರಮ ಕೈಗೊಳ್ಳಬೇಕು. ಎನ್‍ಇಎಸ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ಆರ್. ಸೆಲ್ವಮಣಿ, ಮುಖ್ಯ ಕಾರ್ಯನಿರ್ವಹಣಧಿಕಾರಿ ಪ್ರಕಾಶ್, ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಫೆ.27ರಂದು ಪ್ರಧಾನಿಗಳಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ: ಬಿ.ಎಸ್.ಯಡಿಯೂರಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.