ಶಿವಮೊಗ್ಗ: ತಂದೆಯವರ ಮಾರ್ಗದರ್ಶನ ಹಾಗೂ ಪಕ್ಷದ ನಿರ್ಧಾರದಂತೆ ನಡೆದುಕೊಳ್ತೇನೆ. ಅದನ್ನು ಆಧರಿಸಿಯೇ ನಾನು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ರಾಜ್ಯ ಉಪಾಧ್ಯಕ್ಷನಾಗಿ ರಾಜ್ಯಾದ್ಯಂತ ಪ್ರವಾಸ ಮಾಡೋದು ನನ್ನ ಕರ್ತವ್ಯವಾಗಿದೆ.
ಹಿಂದಿನಿಂದಲೂ ಅದನ್ನೇ ಮಾಡಿದ್ದೇನೆ, ಮುಂದೆನೂ ಮಾಡ್ತೇನೆ. ಶಿಕಾರಿಪುರದ ಮುಖಂಡರು, ಕಾರ್ಯಕರ್ತರು ತಂದೆಯ ಮೇಲೆ ಒತ್ತಡ ಹೇರಿದ್ದರು. ಹಾಗಾಗಿ ತಂದೆಯವರು ಇಂದು ತೀರ್ಮಾನ ಪ್ರಕಟಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹೇಳಿದರು.
ಯಡಿಯೂರಪ್ಪಗೆ ನಿವೃತ್ತಿ ಅನ್ನೋದೇ ಇಲ್ಲ. ಅವರ ಡಿಕ್ಷನರಿಯಲ್ಲಿ ನಿವೃತ್ತಿ ಎನ್ನುವ ಪದ ಇಲ್ಲ. ಹಿಂದೆ ಕೂಡ ಬಿಜೆಪಿ ಸಂಘಟನೆಗೆ ಕೆಲಸ ಮಾಡಿದ್ರು, ಮುಂದೆನೂ ಮಾಡ್ತಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ವೇಳೆ ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುತ್ತೇನೆ ಎಂದು ಹೇಳಿದ್ದರು.
ಈ ಬಗ್ಗೆ ಪ್ರತಿಪಕ್ಷಗಳಿಗೆ ಸವಾಲು ಕೂಡ ಹಾಕಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೂಡ ಮಾಡ್ತಾರೆ. ಅಧಿಕಾರಕ್ಕೆ ತರಲು ಶ್ರಮ ಹಾಕ್ತಾರೆ ಎಂದರು.
ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ: ಮಗನಿಗೆ ಕ್ಷೇತ್ರ ಬಿಟ್ಟುಕೊಟ್ಟ ಮಾಜಿ ಸಿಎಂ