ಶಿವಮೊಗ್ಗ: ಕಾಂಗ್ರೆಸ್ನ ಇಬ್ಬರು ಮುಖಂಡರು ನಾನು ಮುಖ್ಯಮಂತ್ರಿ, ನಾನು ಮುಖ್ಯಮಂತ್ರಿ ಎಂದು ಬಡಿದಾಡುತ್ತಿದ್ದಾರೆ. ನಾನು ಅವರಿಗೆ ಒಂದು ಕಿವಿ ಮಾತು ಹೇಳೋಕೆ ಇಷ್ಟಪಡುತ್ತೇನೆ. ವಿಧಾನಸಭೆಯಲ್ಲೂ ಸಹ ಹೇಳಿದ್ದೇನೆ, ನಾನು ಇರೋವರೆಗೂ ನಿಮ್ಮನ್ನ ಯಾರನ್ನು ಮುಖ್ಯಮಂತ್ರಿ ಆಗಲು ಬಿಡುವುದಿಲ್ಲ. ಮತ್ತೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದು ಬಿಜೆಯವರನ್ನೇ ಮುಖ್ಯಮಂತ್ರಿ ಮಾಡುತ್ತೇನೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಕೈ ಕಾಲು ಇನ್ನೂ ಗಟ್ಟಿ ಇದೆ. ಇನ್ನೊಂದು ವರ್ಷಗಳ ಕಾಲ ರಾಜ್ಯಾದ್ಯಂತ ಪ್ರವಾಸ ಮಾಡಿ, ಮತ್ತೊಮ್ಮೆ ಭಾರತೀಯ ಜನತಾ ಪಾರ್ಟಿಯನ್ನು ಅಧಿಕಾರಕ್ಕೆ ತರುತ್ತೇನೆ. ನಮ್ಮ ಪಕ್ಷದವರನ್ನೇ ಮುಖ್ಯಮಂತ್ರಿ ಮಾಡುತ್ತೇನೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಿಮ್ಮಪ್ಪನ ಆಣೆಗೂ, ನೀವು ಮುಖ್ಯಮಂತ್ರಿ ಆಗಲ್ಲ. ಬಿಜೆಪಿಯವರೇ ಮುಂದಿನ ಮುಖ್ಯಮಂತ್ರಿ ಆಗ್ತಾರೆ ಎಂದರು.
ಇದನ್ನೂ ಓದಿ: ಬಿಎಸ್ವೈ ವಿರುದ್ಧದ ಎಫ್ಐಆರ್ ಊರ್ಜಿತ ಪ್ರಕರಣ: ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ