ETV Bharat / state

‘ಹೂಮಳೆ ಸುರಿಸಿಕೊಂಡು ನಾವು ಭಿಕ್ಷೆ ಬೇಡಬೇಕಾ: ಆಶಾ ಕಾರ್ಯಕರ್ತೆಯರ ಆಕ್ರೋಶ - Karnataka State United States Asha Activists Association

ಕೊರೊನಾ ವಾರಿಯರ್ಸ್​​ ಆಗಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದ್ದಾರೆ. ಸುರಕ್ಷತಾ ಸಾಮಗ್ರಿಗಳು ಸೇರಿದಂತೆ ಗೌರವಧನ ನಿಗದಿಗೊಳಿಸುವಂತೆ ಆಗ್ರಹಿಸಿದ್ದಾರೆ.

if we want to beg for a money from government.? Asha workers protest over several demands
‘ಹೂಮಳೆ ಸುರಿಸಿಕೊಂಡು ನಾವು ಭಿಕ್ಷೆ ಬೇಡಬೇಕಾ: ಆಶಾ ಕಾರ್ಯಕರ್ತೆಯರ ಆಕ್ರೋಶ
author img

By

Published : Jul 17, 2020, 4:10 PM IST

ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕೊರೊನಾ ವೈರಸ್ ಮಹಾಮಾರಿಯನ್ನು ಲೆಕ್ಕಿಸದೇ ಕಾರ್ಯನಿರ್ವಹಿಸುತ್ತಿದ್ದೇವೆ. ಆದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೆರಿಸುತ್ತಿಲ್ಲ. ಗೌರವಧನವನ್ನು ಹಾಲಿನ ಡೈರಿಯಿಂದ, ಡಿಸಿಸಿ ಬ್ಯಾಂಕ್​​​​​​​ನಿಂದ ತೆಗೆದುಕೊಳ್ಳಿ ಎನ್ನುತ್ತಾರೆ. ನಾವೇನು ಭಿಕ್ಷೆ ಬೇಡುತ್ತಿದ್ದೇವಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಹೂಮಳೆ ಸುರಿಸಿಕೊಂಡು ನಾವು ಭಿಕ್ಷೆ ಬೇಡಬೇಕಾ: ಆಶಾ ಕಾರ್ಯಕರ್ತೆಯರ ಆಕ್ರೋಶ

ಕೂಡಲೇ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12,000 ರೂ. ಗೌರವಧನ ಖಾತರಿಪಡಿಸಬೇಕು ಹಾಗೂ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದಲ್ಲದೆ ಕೊರೊನಾ ವೈರಸ್​ಗೆ ತುತ್ತಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಹಾಗೂ ಸಂಪೂರ್ಣ ಚಿಕಿತ್ಸೆ ನೀಡಬೇಕು ಎಂದು ಸರ್ಕಾರಕ್ಕೆ ಹತ್ತು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೂ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಕೇವಲ ಆಶಾ ಕಾರ್ಯಕರ್ತೆಯರಿಗೆ ಹೂಮಳೆ ಸುರಿದರೆ ಸಾಕಾಗದು, ಹೂಮಳೆ ಸುರಿಸಿಕೊಂಡು ನಾವೀಗ ಭಿಕ್ಷೆ ಬೇಡಬೇಕಾ ಎಂದು ಆಕ್ರೋಶ ಹೊರಹಾಕಿದರು. ನಮ್ಮ ಸಂಕಷ್ಟಕ್ಕೂ ಸರ್ಕಾರ ಬರಬೇಕು. ಇಲ್ಲವಾದರೆ ಹೋರಾಟ ಅನಿರ್ವಾಯವಾಗಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.