ಶಿವಮೊಗ್ಗ: ಲಾಕ್ಡೌನ್ ನಡುವೆಯೂ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ.
ಸೊರಬ ತಾಲೂಕು ಆನವಟ್ಟಿಯಲ್ಲಿ ದೇವರಾಜ್ ಎಂಬಾತ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಜಿಲ್ಲಾ ಅಬಕಾರಿ ಡಿಸಿ ಕಾರ್ಯಪಡೆಯ ಇನ್ಸ್ಪೆಕ್ಟರ್ ಹನುಮಂತಪ್ಪನವರ ತಂಡ ದಾಳಿ ನಡೆಸಿ ಕಾರು ಹಾಗೂ 25 ಮದ್ಯದ ಬಾಕ್ಸ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಆರೋಪಿ ದೇವರಾಜ್ ಕಾರನ್ನು ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಇನ್ನು ಲಾಕ್ ಡೌನ್ ಆದ ನಂತರ ಜಿಲ್ಲೆಯಲ್ಲಿ ಇದುವರೆಗೂ 13 ಕೇಸು ದಾಖಲಿಸಿ, 500 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಬಕಾರಿ ಡಿಸಿ ಕ್ಯಾಪ್ಟನ್ ಅರ್ಜುನ್ ತಿಳಿಸಿದ್ದಾರೆ.