ಶಿವಮೊಗ್ಗ: ಬೈಕ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯಿಂದ 1 ಕೆಜಿ 100 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಸಾಗರ ಪಟ್ಟಣಕ್ಕೆ ಬೈಕ್ನಲ್ಲಿ ಬರುತ್ತಿದ್ದ ಇಬ್ಬರನ್ನು ಮರಸ ಗ್ರಾಮದ ಬಳಿ ತಡೆದು ತಪಾಸಣೆ ನಡೆಸಿದಾಗ 1 ಕೆಜಿ 100 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಬೈಕ್ ಚಾಲಕ ತಾಹಿರ್ ಅಲಿಯಾಸ್ ತಾಹಿರ್ ಅಹಮದ್ ಎಂಬುವನನ್ನು ವಶಕ್ಕೆ ಪಡೆಯಲಾಗಿದೆ.
ಇನ್ನೋರ್ವ ಶೌಕತ್ (58) ಎಂಬಾತ ಪರಾರಿಯಾಗಿದ್ದಾನೆ. ಈ ಕುರಿತು ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.