ಶಿವಮೊಗ್ಗ: ಅಕ್ರಮವಾಗಿ ಮಿಲಿಟರಿ ಮದ್ಯ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಅಬಕಾರಿ ಪೊಲೀಸರು ಭದ್ರಾವತಿಯಲ್ಲಿ ಬಂಧಿಸಿದ್ದಾರೆ.
ಇಲ್ಲಿನ ಭದ್ರಾವತಿಯ ಬೈಪಾಸ್ ರಸ್ತೆಯ ಬುಳ್ಳಾಪುರ ಹಾಗೂ ಮಿಲಿಟರಿ ಕ್ಯಾಂಪ್ ಬಳಿ ಅಕ್ರಮವಾಗಿ ಮಿಲಿಟರಿ ಮದ್ಯ ಎಂದು ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಮದ್ಯ, ಕಾರು ಹಾಗೂ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಎರಡು ಪ್ರಕರಣಗಳಲ್ಲಿ 7.5 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.
ಅಜಯ್, ಕಿರಣ್, ಮನೋಜ್ ಹಾಗೂ ನವೀನ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಪೊಲೀಸರು ತನಿಖೆ ನಡೆಸಿದ್ದಾರೆ.