ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಗೇರುಪುರ ಗ್ರಾಮದಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಸಂಘಟನೆಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಜಿಲ್ಲೆಯ ಹೊಸ ನಗರ ತಾಲೂಕಿನ ಗೇರುಪುರ ಗ್ರಾಮದಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುವ ಜೊತೆಗೆ ಅಕ್ರಮ ಸ್ಫೋಟಗಳನ್ನು ಬಳಸುತ್ತಿರುವ ವ್ಯಕ್ತಿಗಳ ವಿರುದ್ಧ ಜಿಲ್ಲಾಡಳಿತ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು.
ಅಕ್ರಮವಾಗಿ ಅನಡೆಸುತ್ತಿರುವ ಎಲ್ಲ ಕಲ್ಲುಗಣಿಗಾರಿಕೆಗಳನ್ನು ನಿಲ್ಲಿಸಬೇಕು. ಇಲ್ಲವಾದರೆ ಸಂಘಟನೆಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ವಾಟಾಳ್ ಮಂಜುನಾಥ್, ಕಾರ್ಯದರ್ಶಿ ನೀತಿನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.