ಶಿವಮೊಗ್ಗ: ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 80 ಸಾವಿರ ಮೌಲ್ಯದ 11 ಬೀಟೆ ಮರದ ತುಂಡುಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಜಿಲ್ಲೆಯ ಉಂಬ್ಳೆಬೈಲು ವಲಯದಲ್ಲಿ ನಡೆದಿದೆ.
ಉಂಬ್ಳೆಬೈಲು ಗ್ರಾಮ ಪಂಚಾಯತಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಲಿಂಗರಾಜು ರವರ ಜಮೀನಿನಲ್ಲಿ ಬೀಟೆ ಮರದ ತುಂಡುಗಳು ಪತ್ತೆಯಾಗಿದ್ದವು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳು ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.