ಶಿವಮೊಗ್ಗ: ಜಿಲ್ಲೆಯ ವಿಮಾನ ನಿಲ್ದಾಣ ಅಭಿವೃದ್ದಿ ಕಾಮಗಾರಿಗೆ ಸಿಎಂ ಬಿ. ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.
ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಆನ್ ಲೈನ್ ಮೂಲಕ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ವಿಮಾನ ನಿಲ್ದಾಣದ ಅಭಿವೃದ್ದಿ ಕಾಮಗಾರಿಯ ಗುದ್ದಲಿ ಪೊಜೆಯನ್ನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ನೆರವೇರಿಸಿದರು. ಇವರಿಗೆ ಸಂಸದ ರಾಘವೇಂದ್ರ ಸಾಥ್ ನೀಡಿದರು. ಈ ವೇಳೆ, ಶಾಸಕ ಕುಮಾರ ಬಂಗಾರಪ್ಪ, ಎಂಎಲ್ಸಿಗಳಾದ ಆಯನೂರು ಮಂಜುನಾಥ್, ಆರ್.ಪ್ರಸನ್ನ ಕುಮಾರ್, ಜಿ.ಪಂ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.
ಓದಿ: ಕರ್ನಾಟಕ ಜನ ಸಂವಾದ: ಬಿಜೆಪಿ ವರ್ಚುವಲ್ ರ‍್ಯಾಲಿಗೆ ಸಿಎಂ ಚಾಲನೆ
ಇನ್ನು ಡಿಸಿಎಂ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರು, ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಅವರ ಕೇಂದ್ರ ಕಚೇರಿ ಹಾಗೂ ಕೇಂದ್ರ ವಲಯ ಮತ್ತು ರಾಷ್ಟ್ರೀಯ ಹೆದ್ದಾರಿ ವಿಭಾಗ ಕಚೇರಿಗಳಿಗೆ ಚಾಲನೆ ನೀಡಿದರು.