ಶಿವಮೊಗ್ಗ: ನಗರದಲ್ಲಿ ಇಂದು ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ಕಂಡು ಬಂದ ಹಿನ್ನೆಲೆ ಪೆನ್ಷನ್ ಮೊಹಲ್ಲಾದಲ್ಲಿ ಬ್ಯಾರಿಕೇಡ್ ಹಾಕಿ ಸೀಲ್ ಡೌನ್ ಮಾಡಿ ರಸ್ತೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದೆ.
ಆಶೋಕನಗರ ಮೊದಲನೇ ಅಡ್ಡರಸ್ತೆ ಹಾಗೂ ಗೋಪಾಳದ ಆದಿ ರಂಗನಾಥ ದೇವಾಲಯ ರಸ್ತೆಯನ್ನು ಸಹ ಸೀಲ್ ಡೌನ್ ಮಾಡಲಾಗಿದೆ. ಈ ಪ್ರದೇಶದಲ್ಲಿ ಮಹಾನಗರ ಪಾಲಿಕೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಯಾನಿಟೈಸ್ ಮಾಡುತ್ತಿದ್ದಾರೆ. ಸೀಲ್ ಡೌನ್ ಪ್ರದೇಶದಲ್ಲಿರುವ ಮನೆಗಳು, ಮಳಿಗೆ ಗೋಡೆ, ಬಾಗಿಲು, ಆವರಣದಲ್ಲಿ ಸಹ ಸ್ಯಾನಿಟೈಸ್ ಮಾಡಲಾಗುತ್ತಿದೆ.
ಕೊರೊನಾ ಪಾಸಿಟಿವ್ ಕಂಡು ಬಂದ ಭದ್ರಾವತಿಯ ಕೂಡ್ಲಿಗೆರೆ ಹಾಗೂ ಶಿವಮೊಗ್ಗ ತಾಲೂಕಿನ ಬೇಡರ ಹೊಸಹಳ್ಳಿಯನ್ನೂ ಸೀಲ್ ಡೌನ್ ಮಾಡಲಾಗಿದೆ. ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ಗಳ ಸಂಖ್ಯೆ 25ಕ್ಕೆ ಎರಿಕೆಯಾಗಿದೆ.