ETV Bharat / state

ಕಾಪೋರೇಟ್ ಹಿಡಿತದಲ್ಲಿ ಭಾರತದ ಮಾಧ್ಯಮ ನರಳುತ್ತಿದೆ: ಪಿ.ಸಾಯಿನಾಥ್ - ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಪಿ.ಸಾಯಿನಾಥ್

ಸಮಕಾಲೀನ ಕಾಲಘಟ್ಟದ ತಲ್ಲಣಗಳು ಮತ್ತು ಸಂಕಷ್ಟಗಳ ಪ್ರಕ್ರಿಯೆಗಳ ವರದಿಗಾರಿಕೆಯೇ ನಿಜವಾದ ಪತ್ರಿಕೋದ್ಯಮ. ಬೃಹತ್ ಪ್ರಮಾಣದಲ್ಲಿರುವ ಬೆಳೆದಿರುವ ಇಂದಿನ ಮಾಧ್ಯಮ ಆ ಕಾರ್ಯನಿರ್ವಹಿಸುತ್ತಿಲ್ಲ. ಕಾಪೋರೇಟ್ ಹಿಡಿತದಲ್ಲಿ ಭಾರತದ ಮಾಧ್ಯಮ ನರಳುತ್ತಿದೆ. ಪತ್ರಿಕಾ ಸ್ವಾತಂತ್ರ್ಯ ಸಂಕಷ್ಟದಲ್ಲಿದೆ ಎಂದು ಪತ್ರಕರ್ತ ಪಿ. ಸಾಯಿನಾಥ್ ಹೇಳಿದರು.

Indian media is suffering under corporate grip: P. Sainath
ಪಿ.ಸಾಯಿನಾಥ್
author img

By

Published : Apr 1, 2022, 8:27 PM IST

ಶಿವಮೊಗ್ಗ: ಭಾರತೀಯ ಪತ್ರಿಕೋದ್ಯಮ ಇಂದು ಸಂಕಷ್ಟದಲ್ಲಿದೆ. ಪತ್ರಿಕಾ ಸ್ವಾತಂತ್ರ್ಯ ಸಂಕಷ್ಟದಲ್ಲಿದೆ. ಪತ್ರಕರ್ತರ ಮೇಲೆ ವಿವಿಧ ಕ್ಷುಲ್ಲಕ ಕಾರಣಗಳಿಗೆ ಮೊಕದ್ದಮೆಗಳನ್ನು ದಾಖಲು ಮಾಡಲಾಗುತ್ತಿದೆ. ಅಲ್ಲದೇ ನೋಟಿಸ್ ನೀಡದೆ ಬಂಧಿಸಲಾಗುತ್ತಿದೆ ಹಾಗೂ ಬೆದರಿಸಲಾಗುತ್ತಿದೆ ಎಂದು ರೇಮನ್ ಮಾಗ್ಸಸೆ ಪ್ರಶಸ್ತಿ ವಿಜೇತ ಅಭಿವೃದ್ಧಿ ಪತ್ರಕರ್ತ ಪಿ. ಸಾಯಿನಾಥ್ ಆತಂಕ ವ್ಯಕ್ತಪಡಿಸಿದರು.

ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಏರ್ಪಡಿಸಿದ್ದ, ಡಾ. ಶಾಂತಿನಾಥ ದೇಸಾಯಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 200 ವರ್ಷಗಳ ಭಾರತೀಯ ಪತ್ರಿಕೋದ್ಯಮದ ಪ್ರಸಕ್ತ ಸ್ಥಿತಿಗತಿಯ ಬಗ್ಗೆ ಉಪನ್ಯಾಸ ನೀಡಿದರು.

ಭಾರತದಲ್ಲಿ ಮಾಧ್ಯಮಗಳನ್ನು ನಿಯಂತ್ರಿಸಲು 52 ಕಾಯ್ದೆಗಳು ಈಗಾಗಲೇ ಅಸ್ತಿತ್ವದಲ್ಲಿತ್ತು. ಇತ್ತೀಚೆಗೆ ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆ ಮತ್ತು ವಿಪತ್ತು ನಿರ್ವಹಣೆ ಕುರಿತ ಕಾಯಿದೆಗಳನ್ನು ಪತ್ರಕರ್ತರ ಮೇಲೆ ದಾಖಲಿಸಿದ್ದು, ಪ್ರಸ್ತುತ ಅವುಗಳ ಸಂಖ್ಯೆ 62 ರಷ್ಟಿದೆ. ಕೋವಿಡ್ ಕಾಲದಲ್ಲಿ ಉತ್ತರಪ್ರದೇಶದ ಗಂಗಾ ನದಿಯಲ್ಲಿ ಹೆಣಗಳು ತೇಲಿದ ವರದಿ ನೀಡಿದ ಮಾಧ್ಯಮಗಳಿಗೆ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳು ಜಾಹೀರಾತು ನೀಡುವುದನ್ನು ನಿಲ್ಲಿಸಿದವು. ಆ ಮೂಲಕ ಅವುಗಳಿಗೆ ಮೂಗುದಾರ ಹಾಕಲಾಯಿತು.

ರೇಮನ್ ಮಾಗ್ಸಸೆ ಪ್ರಶಸ್ತಿ ವಿಜೇತ ಅಭಿವೃದ್ಧಿ ಪತ್ರಕರ್ತ ಪಿ. ಸಾಯಿನಾಥ್

ಕೋವಿಡ್‌ನ ಮೊದಲ 12 ತಿಂಗಳುಗಳಲ್ಲಿ ಭಾರತದ ಜಿಡಿಪಿ ಶೇ. 7ರಷ್ಟು ಇಳಿಕೆಯಾಗಿದೆ ಎಂದು ಸರ್ಕಾರ ಹೇಳಿತು. ಆದರೆ, ಇದೇ ಸಮಯದಲ್ಲಿ ಭಾರತೀಯ ಬಿಲಿಯನೇರ್‌ಗಳ ಸಂಪತ್ತಿನಲ್ಲಿ ಶೇ. 22 ರಷ್ಟು ಏರಿಕೆಯಾಯಿತು. ಇವುಗಳ ತುಲನಾತ್ಮಕ ವರದಿಗಳು, ವಿಶ್ಲೇಷಣಗಳನ್ನು ಮುಖ್ಯವಾಹಿನಿ ಮಾಧ್ಯಮ ನೀಡುವುದೇ ಇಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: ಶಿವಮೊಗ್ಗ ಸ್ಮಾರ್ಟ್​ ಸಿಟಿ ಕಾಮಗಾರಿ: 2023ರ ಮಾರ್ಚ್ ಒಳಗೆ ಪೂರ್ಣ

ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚಿಯಲ್ಲಿ ಒಟ್ಟು 188 ದೇಶಗಳಲ್ಲಿ ಭಾರತ 142ನೇ ಸ್ಥಾನದಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಅಪಾಯದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕ ಸೂಚಿಯಲ್ಲಿ 132 ಸೇರಿದಂತೆ ವಿವಿಧ ಮಾನದಂಡಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ. ಆದರೆ, ಬಿಲಿಯನೇರ್‌ಗಳ ಒಟ್ಟು ಸಂಖ್ಯೆಯಲ್ಲಿ ವಿಶ್ವದಲ್ಲಿಯೇ 3ನೇ ಸ್ಥಾನದಲ್ಲಿದೆ. ಸಮಕಾಲೀನ ಕಾಲಘಟ್ಟದ ತಲ್ಲಣಗಳು ಮತ್ತು ಸಂಕಷ್ಟಗಳ ಪ್ರಕ್ರಿಯೆಗಳ ವರದಿಗಾರಿಕೆಯೇ ನಿಜವಾದ ಪತ್ರಿಕೋದ್ಯಮ. ಬೃಹತ್ ಪ್ರಮಾಣದಲ್ಲಿರುವ ಬೆಳೆದಿರುವ ಇಂದಿನ ಮಾಧ್ಯಮ ಆ ಕಾರ್ಯನಿರ್ವಹಿಸುತ್ತಿಲ್ಲ ಎಂದು ವಿಷಾದಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.