ETV Bharat / state

ಸಾವರ್ಕರ್ ಅವರಿಗೆ ಅಪಮಾನ ಮಾಡಿರುವುದು ಖಂಡನೀಯ: ಬಿ ವೈ ರಾಘವೇಂದ್ರ - ರಾಘವೇಂದ್ರ

ವೀರ ಸಾವರ್ಕರ್ ಅವರಿಗೆ ಅಪಮಾನ ಮಾಡಿರುವ ಘಟನೆ ಖಂಡನಿಯ. ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ತಿಂಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಯಾಗುತ್ತಿವೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.

ಸಾವರ್ಕರ್​ಗೆ ಅಪಮಾನ
ಸಾವರ್ಕರ್​ಗೆ ಅಪಮಾನ
author img

By

Published : Aug 14, 2022, 3:51 PM IST

ಶಿವಮೊಗ್ಗ: ನಿನ್ನೆ ಶಿವಪ್ಪನಾಯಕ ಸಿಟಿ ಮಾಲ್​​ನಲ್ಲಿ ವೀರ ಸಾವರ್ಕರ್ ಅವರ ಭಾವಚಿತ್ರ ಹಾಕಿರುವುದನ್ನು ತೆಗೆಸಲು ಮುಂದಾದ ಘಟನೆ ಖಂಡಿನೀಯ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿರೋಧಿ ಚಟುವಟಿಕೆ ಮಾಡುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ವೀರ ಸಾವರ್ಕರ್ ಅವರಿಗೆ ಅಪಮಾನ ಮಾಡಿರುವ ಘಟನೆ ಖಂಡನೀಯ. ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ತಿಂಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಆಗುತ್ತಿವೆ. ಎಚ್ಚರಿಕೆಯಿಂದ ನಡೆದುಕೊಳ್ಳುವ ಅವಶ್ಯಕತೆ ಇದೆ, ಇಂತವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದರು.

ಸಾವರ್ಕರ್ ಅವರಿಗೆ ಅಪಮಾನ ಮಾಡಿರುವುದು ಖಂಡನಿಯ: ಬಿ ವೈ ರಾಘವೇಂದ್ರ

ಕೇಂದ್ರ ಸರ್ಕಾರದ ಆದೇಶದಂತೆ ದೇಶದಲ್ಲಿ ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿದವರ ನೆನಪನ್ನು ಯುವ ಪಿಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಕೆಲವು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಹಾಗೆಯೇ ಶಿವಮೊಗ್ಗ ಜಿಲ್ಲೆಯ ಈಸೂರಿನ ಬಗ್ಗೆ ಸಾರ್ವಜನಿಕರಿಗೆ ಮಹತ್ವ ತಿಳಿಸುವ ಕಾರ್ಯಕ್ರಮ ಸಹ ಇಂದು ನಡೆಯುತ್ತಿದೆ ಎಂದು ತಿಳಿಸಿದರು.

ಪರಿಹಾರ: ಜಿಲ್ಲೆಯಲ್ಲಿ ಐದು ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದೆ. ಸರ್ಕಾರ ರೈತರಿಗೆ ಪರಿಹಾರ ಕೊಡುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪನವರು ಸಹ ಪರಿಸ್ಥಿತಿ ಅವಲೋಕಿಸಿ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ :ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಭಾವಚಿತ್ರ: ಎಸ್​​ಡಿಪಿಐ ಕಾರ್ಯಕರ್ತರ ಆಕ್ರೋಶ, ದೂರು ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.