ETV Bharat / state

ಲಾಕ್‍ಡೌನ್ ಕಟ್ಟುನಿಟ್ಟಿನ ಜಾರಿಗೆ ಎಲ್ಲರ ಸಹಕಾರ ಅಗತ್ಯ: ಸಚಿವ ಈಶ್ವರಪ್ಪ

ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಸಚಿವ ಈಶ್ವರಪ್ಪ ಹಿರಿಯ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಿದರು. ಇದೇ ವೇಳೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುವವರ ಮೇಲೆ ತೀವ್ರ ನಿಗಾ ಇಡುವಂತೆ ಸೂಚನೆ ನೀಡಿದರು.

ESWARAPPA
ESWARAPPA
author img

By

Published : Apr 27, 2021, 8:49 PM IST

ಶಿವಮೊಗ್ಗ: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕರ್ಫ್ಯೂವನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಿದರು. ಕರ್ಫ್ಯೂ ಕುರಿತಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪೊಲೀಸ್ ಇಲಾಖೆ ಜಾರಿಗೊಳಿಸಬೇಕು. ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿ ಇತ್ಯಾದಿಗಳಿಗಾಗಿ ನಿಗದಿಪಡಿಸಿದ ಸಮಯ ಹೊರತುಪಡಿಸಿ ಮನೆಯಿಂದ ಹೊರಗೆ ಬರಬಾರದು. ಎರಡನೇ ಅಲೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತಿ ಅಗತ್ಯವಾಗಿದೆ ಎಂದು ಹೇಳಿದರು.

ಬೆಂಗಳೂರಿನಿಂದ ಬರುವವರ ಮೇಲೆ ನಿಗಾ: ಬೆಂಗಳೂರಿನಿಂದ ಆಗಮಿಸುವವರ ಮೇಲೆ ಕಳೆದ ಬಾರಿಯಂತೆ ಈ ಬಾರಿಯೂ ನಿಗಾ ಇರಿಸಲು ಕ್ರಮ ಕೈಗೊಳ್ಳಬೇಕು. ಅವರು ಕಡ್ಡಾಯವಾಗಿ ಹೋಂ ಐಸೋಲೇಷನ್‍ನಲ್ಲಿರುವುದನ್ನು ಗ್ರಾಮಗಳಲ್ಲಿ ರಚಿಸಲಾಗಿರುವ ಟಾಸ್ಕ್​ಫೋರ್ಸ್ ಸಮಿತಿ ಖಾತ್ರಿ ಪಡಿಸಬೇಕು. ಆರಂಭದ ದಿನಗಳಲ್ಲಿ ಕನಿಷ್ಠ ಅವರ ದೇಹದ ತಾಪಮಾನವನ್ನು ಎರಡು ದಿನಗಳಿಗೊಮ್ಮೆ ಪರಿಶೀಲಿಸಲು ವ್ಯವಸ್ಥೆ ಮಾಡಬೇಕು. ಅವರಿಗೆ ಕನಿಷ್ಠ ವೈದ್ಯಕೀಯ ಸೇವೆಯನ್ನು ಮನೆಗೆ ತಲುಪಿಸಿದರೆ ಆಸ್ಪತ್ರೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸಾಧ್ಯವಿದೆ ಎಂದು ಹೇಳಿದರು.

ತಾಲೂಕುಗಳ ವ್ಯವಸ್ಥೆ ಪರಿಶೀಲನೆ: ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ವ್ಯವಸ್ಥಿತವಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಪರಿಶೀಲನೆಗೆ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಅಧಿಕಾರಿಗಳ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಭೆಯನ್ನು ನಡೆಸಲಾಗುವುದು ಎಂದರು.

ಕಂಟೇನ್‍ಮೆಂಟ್ ವಲಯ: ಸರ್ಕಾರದ ಮಾರ್ಗಸೂಚಿ ಪ್ರಕಾರ ನಿಗದಿತ ಸಂಖ್ಯೆಯ ಕೊರೊನಾ ಪಾಸಿಟಿವ್ ಕಂಡು ಬರುವ ಪ್ರದೇಶವನ್ನು ಕಂಟೇನ್‍ಮೆಂಟ್ ವಲಯ ಎಂದು ಗುರುತಿಸಲಾಗುವುದು. ಅಂತಹ ಕಡೆಗಳಲ್ಲಿ ಅಗತ್ಯವಿದ್ದರೆ ಸ್ಥಳೀಯಾಡಳಿತದಿಂದ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

ರೆಮ್ಡೆಸಿವಿರ್ ಕೃತಕ ಬೇಡಿಕೆ ಸೃಷ್ಟಿಸಬೇಡಿ: ಕೊರೊನಾ ಪಾಸಿಟಿವ್ ವ್ಯಕ್ತಿಗಳಿಗೆ ರೆಮ್ಡೆಸಿವಿರ್ ನೀಡಿದರೆ ಸಂಪೂರ್ಣವಾಗಿ ಗುಣಮುಖರಾಗುತ್ತಾರೆ ಎಂಬುವುದಕ್ಕೆ ಆಧಾರವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯ ರೋಗಿಗಳ ಅಂಕಿ- ಅಂಶಗಳನ್ನು ನೋಡಿದರೆ ಸಹ ಇದು ಸ್ಪಷ್ಟವಾಗುತ್ತದೆ. ಜಿಲ್ಲೆಯಲ್ಲಿ ಇದುವರೆಗೆ ಗುಣಮುಖರಾಗಿರುವ ಶೇ.80ರಷ್ಟು ಮಂದಿಗೆ ಈ ಇಂಜೆಕ್ಷನ್ ನೀಡಲಾಗಿರಲಿಲ್ಲ ಎಂಬುವುದನ್ನು ಗಮನಿಸಬೇಕಾಗಿದೆ. ಅದೇ ರೀತಿ ಕೊರೊನಾದಿಂದ ಸಾವಿಗೀಡಾದ ಎಲ್ಲಾ 15 ಮಂದಿಗೂ ಸದರಿ ಇಂಜೆಕ್ಷನ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ತಜ್ಞ ವೈದ್ಯರ ಸಲಹೆ ಅನುಸರಿಸಬೇಕು ಎಂದು ಅವರು ಮನವಿ ಮಾಡಿದರು.

ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಮಾತನಾಡಿ, ಕೊರೊನಾ ಕರ್ಫ್ಯೂ ಕುರಿತು ಸಾರ್ವಜನಿಕರಿಗೆ ಅಟೋ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಜನತೆ ಉತ್ತಮವಾಗಿ ಸಹಕಾರ ನೀಡಿದ್ದಾರೆ ಎಂದು ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.