ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ತಮ್ಮ 73 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
ತಮ್ಮ ಹುಟ್ಟುಹಬ್ಬದ ಸಲುವಾಗಿ ನಗರದ ರಾಮಣ್ಣ ಶ್ರೇಷ್ಟಿ ಪಾರ್ಕ್ನ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗಾಂಧಿ ಬಜಾರ್ನಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಮೊದಲ ವರ್ಷದ ಸಾಧನೆಯನ್ನು ಜನರಿಗೆ ತಿಳಿಸುವ ಅಭಿಯಾನದಲ್ಲಿ ಭಾಗಿಯಾದರು.
ಗಾಂಧಿ ಬಜಾರ್ ನ ಪ್ರತಿ ಅಂಗಡಿ, ಮನೆಗಳಿಗೆ ತೆರಳಿ ಸರ್ಕಾರದ ಸಾಧನೆಯ ಕರಪತ್ರವನ್ನು ನೀಡಿದ ಅವರು, ಮತ್ತೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದ ಮತದಾರರಿಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಬಿಜೆಪಿಯ ಪಾಲಿಕೆ ಸದಸ್ಯರು ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.