ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಗ್ಯಾಸ್ ಸಿಲಿಂಡರ್ ಇಟ್ಟು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದ್ದರೂ ಸರ್ಕಾರ ಬೆಲೆ ನಿಯಂತ್ರಣ ಮಾಡದೆ ಜನ ಸಾಮಾನ್ಯರ ಜೀವನದ ಮೇಲೆ ಬರೆ ಎಳೆಯುತ್ತಿದೆ. ಕೂಡಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ನಿಯಂತ್ರಣಕ್ಕೆ ತರಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಟಿವಿ, ಗ್ಯಾಸ್, ಫ್ರಿಡ್ಜ್ ಇದ್ದವರಿಗೆ ಬಿಪಿಎಲ್ ಕಾರ್ಡ್ ರದ್ದುಗೊಳಿಸುತ್ತೇವೆ ಎಂಬ ಬೇಜವಾಬ್ದಾರಿಯ ಹೇಳಿಕೆ ನೀಡಿರುವುದು ಖಂಡನೀಯ. ಸಚಿವರು ಇಂಥ ಹೇಳಿಕೆಗಳನ್ನು ಮತ್ತೊಮ್ಮೆ ನೀಡಬಾರದು ಎಂದು ಆಗ್ರಹಿಸಿದರು.