ETV Bharat / state

ಫೆ. 24, 25 ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ: ಸಚಿವ ಕೆ.ಎಸ್. ಈಶ್ವರಪ್ಪ

ಫೆಬ್ರವರಿ 24 ಮತ್ತು‌ 25 ರಂದು ರಾಜ್ಯ ಸರ್ಕಾರ ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದೆ. ಈ ಕುರಿತು ಸಚಿವ ಕೆ. ಎಸ್​. ಈಶ್ವರಪ್ಪ ಮಾಹಿತಿ ನೀಡಿದ್ದಾರೆ.

job fest organised in shimogha
ಸಚಿವ ಕೆ.ಎಸ್.ಈಶ್ವರಪ್ಪ
author img

By

Published : Feb 5, 2020, 4:47 PM IST

ಶಿವಮೊಗ್ಗ: ಇದೇ ತಿಂಗಳ 24 ಮತ್ತು‌ 25 ರಂದು ನಗರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ರಾಜ್ಯ ಸರ್ಕಾರ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗ ಮೇಳದ ವೆಬ್​​ಸೈಟ್ ಉದ್ಘಾಟಿಸಿ ಮಾತನಾಡಿದ ಅವರು, ಶಿವಮೊಗ್ಗದ ಬಾಪೂಜಿ ನಗರದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಯುವಕರಿಗೆ ಸಚಿವ ಈಶ್ವರಪ್ಪ ಕರೆ ನೀಡಿದ್ರು. ಈ ಮೇಳದಲ್ಲಿ ವಿವಿಧ ಕ್ಷೇತ್ರದ‌ 120 ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ. ಉತ್ಪಾದನಾ ವಲಯ ಮತ್ತು ಆಟೋಮೊಬೈಲ್ ಕ್ಷೇತ್ರದ ಕಂಪನಿಗಳನ್ನು ಆಹ್ವಾನಿಸಲಾಗಿದೆ. ಮೇಳದಲ್ಲಿ ನೇರ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಎಸ್ಎಸ್ಎಲ್​​​​ಸಿ, ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವೀಧರರು 18 ರಿಂದ 40 ವರ್ಷದ ಒಳಗಿನವರು ಭಾಗವಹಿಸಬಹುದು ಎಂದರು.

ಉದ್ಯೋಗ ಮೇಳದ ಕುರಿತು ಸಚಿವ ಕೆ.ಎಸ್. ಈಶ್ವರಪ್ಪ ಮಾಹಿತಿ

ಉದ್ಯೋಗಾಕಾಂಕ್ಷಿಗಳ ಅನುಕೂಲಕ್ಕಾಗಿ ವೆಬ್​​​ಸೈಟ್ www.shimogaudyogamela.in ಸಿದ್ಧಪಡಿಸಲಾಗಿದೆ. ಸಂದರ್ಶನಕ್ಕೆ ಆಗಮಿಸುವ ಆಕಾಂಕ್ಷಿಗಳು ಮೊದಲು ವೆಬ್​​ಸೈಟ್​​ನಲ್ಲಿ‌ ನೇರವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. shivamoggaudyogamela@gmail.com ದೂರವಾಣಿ ಸಂಖ್ಯೆ 8762778408, 9448787752,7892548980 ಹಾಗೂ 08182-255293 ಸಂಪರ್ಕಿಸಬಹುದು, ಪ್ರವೇಶ ಉಚಿತವಾಗಿದೆ. ಉದ್ಯೋಗ ಮೇಳಕ್ಕೆ ಆಗಮಿಸುವವರು ಕನಿಷ್ಠ 20 ಬಯೋ ಡೇಟಾಗಳನ್ನು ತರುವಂತೆ ಸೂಚಿಸಲಾಗಿದೆ.

ಇನ್ನು, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಕೌಶಲ್ಯಾಧಿಕಾರಿ ಗಣಪತಿ ನಾಯಕ್, ಉದ್ಯೋಗಾಧಿಕಾರಿ ಖಲಂದರ್ ಖಾನ್ ಹಾಗೂ ಕಾಶಿನಾಥ್ ಸೇರಿದಂತೆ ಇತರರು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.